ನಿಡ್ಡೋಡಿ ಉಷ್ಣ ವಿದ್ಯುತ್ ಸ್ಥಾವರ ವಿರುದ್ಧ ಹೋರಾಟ: ಅಮರನಾಥ ಶೆಟ್ಟಿ
ಮೂಲ್ಕಿ: ನಿಡ್ಡೋಡಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಜತೆಗೂಡಿ 3,500 ಎಕರೆ ಪ್ರದೇಶದಲ್ಲಿ ಉಷ್ಣ ವಿದ್ಯುತ್ ಸ್ಥಾವರ ನಿರ್ಮಿಸಲು ಯುತ್ನಿಸುತ್ತಿದ್ದು ಇದರಿಂದ ಪರಿಸರದ ಗ್ರಾಮಸ್ಥರಿಗೆ ತೊಂದರೆಯಾಗಲಿದ್ದು ಇದರ ವಿರುದ್ಧ ಹೋರಾಡುವುದಾಗಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ. ಅಮರನಾಥ ಶೆಟ್ಟಿ ಹೇಳಿದರು.
ಮೂಲ್ಕಿಯ ಹೋಟೆಲ್ ಆಧಿಧನ್ನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದ ಮೂಡುಬಿದಿರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತಗೊಂಡಿತ್ತು. ತನ್ನ ಅವಧಿಯಲ್ಲಿ ಕ್ಷೇತ್ರದಲ್ಲಿ ಸರ್ಕಾರಿ ಕಾಲೇಜು, ಪಾಲಿಟೆಕ್ನಿಕ್, ಅಗ್ನಿ ಶಾಮಕ ದಳ ಕಚೇರಿ, ಮೂಡುಬಿದಿರೆ ತಾಲೂಕಿಗೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಅನುಷ್ಠಾನಗೊಳಿಸಿದ್ದು ಮೂಲ್ಕಿಯಲ್ಲಿ ಅಗ್ನಿಶಾಮಕ ದಳ ಕಚೇರಿ ಹಾಗೂ ಮೂಲ್ಕಿ ತಾಲೂಕು ರಚನೆಗೆ ಪ್ರಯತ್ನಿಸಿದ್ದೆ. ಆದರೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿದ್ದು ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಿದ್ದಲ್ಲಿ ಮೂಲ್ಕಿಗೆ ವಿಶೇಷ ತಹಸೀಲ್ದಾರ್ ನೇಮಕ ಹಾಗೂ ಮೂಲ್ಕಿ ತಾಲೂಕು ರಚನೆಗೆ ಹೆಚ್ಚಿನ ಒತ್ತು ನೀಡುವುದಾಗಿ ಅಮರನಾಥ ಶೆಟ್ಟಿ ಹೇಳಿದರು.
ಸಭೆಯಲ್ಲಿ ಕೆಲವರು ಜೆಡಿಎಸ್ಗೆ ಸೇರ್ಪಡೆಗೊಂಡರು. ಪಕ್ಷದ ಅಶ್ವಿನ್ ಪೆರೇರಾ, ಇಕ್ಬಾಲ್ ಅಹಮ್ಮದ್, ಫೆಲಿಕ್ಸ್ ಡಿಸೋಜ, ಸೇರಿದಂತೆ ಹಲವಾರು ನಾಯಕರು ಸಭೆಯನ್ನುದ್ದೇಶಿಸಿ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

