ನಂದನಹಿತ್ತಿಲು ದೈವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ
ಬಂಟ್ವಾಳ: ಕೇವಲ 136 ದಿನಗಳಲ್ಲಿ ಶಿಲಾಮಯವಾಗಿ ನಿರ್ಮಾಣಗೊಂಡು, ದಾಖಲೆ ಬರೆದ ಚಿನ್ನದ ಪೇಟೆಯಾದ ನಂದನಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದಲ್ಲಿ ಧರ್ಮದೇವತಾ ಪುನರ್ ಪ್ರತಿಷ್ಠೆ, ಕಲಶಾಭಿಷೇಕವು ಭಾನುವಾರ ಸಡಗರದಿಂದ ನೆರವೇರಿತು.
ಪೊಳಲಿ ಶ್ರೀ ಗಿರೀಶ್ ತಂತ್ರಿ ಮತ್ತು ಎಡಪದವು ಶ್ರೀ ವೆಂಕಟೇಶ್ ತಂತ್ರಿಗಳ ಪೌರೋಹಿತ್ಯದಲ್ಲಿ ನಡೆದ ಬ್ರಹ್ಮಕಲಶೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.
ಬ್ರಹ್ಮಕಲಶೋತ್ಸವದ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರ ಸಂಚಾಲಕ ಕಲ್ಲಡ್ಕ ಡಾ. ಪ್ರಭಾಕರ ಭಟ್, ತ್ಯಾಗ, ಸಮರ್ಪಣೆಯ ದ್ಯೋತಕವಾಗಿರುವ ಕೇಸರಿಯು ದೇಶದ ಸಂಸ್ಕೃತಿಯ ಪ್ರತೀಕವಾಗಿದೆ. ಕೇಸರಿ ಬಿಟ್ಟರೆ ಈ ದೇಶದಲ್ಲಿ ಬದುಕೇ ಇಲ್ಲ ಎಂದು ಹೇಳಿದರು.
ಈ ದೇಶದ ಮಣ,ು ಕೂಡ ಸರ್ವಶೇಷ್ಟ. ಇತ್ತೀಚಿನ ದಿನಗಳಲ್ಲಿ ಹಿಂದೂ ಸಮಾಜವನ್ನು ನಾಶ ಮಾಡುವಂತಹ ಷಡ್ಯಂತ್ರಗಳು ನಡೆಯುತ್ತಿದೆ. ಇದರ ವಿರುದ್ಧ ಹಿಂದೂ ಸಮಾಜ ಧ್ವನಿ ಎತ್ತಬೇಕು. ಆಮೂಲಕ ದೇಶದ ಸಂಸ್ಕೃತಿ, ಸಂಸ್ಕಾರವನ್ನು ಉಳಿಸಬೇಕು ಎಂದರು.
ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ, ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಧಾರ್ಮಿಕ ಉಪನ್ಯಾಸ ನೀಡಿದರು.
ಕ್ಷೇತ್ರದ ಜೀರ,ೋದ್ಧಾರ ಸಮಿತಿ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ನಾಗರಾಜ ಶೆಟ್ಟಿ, ಪ್ರಗತಿಪರ ಕೃಷಿಕ ರಾಜೇಶ್ ನಾಯಕ್ ಉಳೇಪಾಡಿ ಗುತ್ತು, ಭಾರತೀಯ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ್ ಹೆಬ್ಬಾರ್, ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಶ್ರೀ ಕ್ಷೇ.ಧ.ಗ್ರಾ.ಯೋ. ಯೋಜನಾಧಿಕಾರಿ ಎಸ್. ದಯಾವತಿ ಮಾತನಾಡಿದರು.
ಶಾಸಕ ರಮಾನಾಥ ರೈ, ಗರೋಡಿ ಶ್ರೀ ಬ್ರಹ್ಮಬೈದರ್ಕಳ ದೈವಸ್ಥಾನದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕಂಕನಾಡಿ, ಸ್ವರ,ೋದ್ಯಮಿ ನಾಗೇಂದ್ರ ಬಾಳಿಗ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಕಾಶ್ ಅಂಚನ್ ಇದ್ದರು.
ಸನ್ಮಾನ: ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿದ ಪೊಳಲಿ ಗಿರಿ ಪ್ರಕಾಶ್ ತಂತ್ರಿ, ಶಿಲ್ಪ ಶಾಸ್ತ್ರಜ್ಞ ಬಸ್ತಿ ಸದಾಶಿವ ಶೆಣೈ, ಮಂಗಳೂರು ಸ್ಥಪತಿ ಎಸ್. ಆನಂದ, ಹೊನ್ನಮ್ಮ ಮಿತ್ತಕೋಡಿ, ಮರದ ಶಿಲ್ಪಿ ನಾರಾಯಣ ಆಚಾರಿ, ಪುರಂದರ ಆಚಾರ್ಯ, ಕಲ್ಯಾಣಿ ಪೇಟೆಮನೆ, ವಾಸ್ತು ಶಿಲ್ಪಿ ದೇವರಾಜ್, ಸಿವಿಲ್ ಕಂಟ್ರ್ಯಾಕ್ಟರ್ ಸುರೇಶ್ ಕುಲಾಲ್, ಉದ್ಯಮಿಗಳಾದ ವಾಸುದೇವ ಬಾಳಿಗ, ಶ್ರೀಧರ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.
ಪುರಸಭಾ ಸದಸ್ಯ ದೇವದಾಸ್ ಶೆಟ್ಟಿ ಸ್ವಾಗತಿಸಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಜಿ. ಆನಂದ ವಂದಿಸಿದರು. ಕಲಾವಿದ ಎಚ್.ಕೆ. ನಯನಾಡು ನಿರೂಪಿಸಿದರು.
ಸಾರ್ವಜನಿಕ ಅನ್ನ ಸಂತರ್ಪಣೆ, ಸ್ಥಳೀಯ ಮಕ್ಕಳಿಂದ ವಿವಿಧ ನೃತ್ಯ ಪ್ರದರ್ಶನ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

