ಮಾಣಿ ಜಂಕ್ಷನ್ ಬಳಿ ಚರಂಡಿ ಅವ್ಯವಸ್ಥೆ
ವಿಟ್ಲ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಜಂಕ್ಷನ್ ಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಚರಂಡಿ ಅವ್ಯವಸ್ಥೆಯಿಂದ ದುರ್ನಾತ ಬೀರುತ್ತಿದ್ದು, ಜನತೆ ಮಾರಕ ರೋಗದ ಭೀತಿಯಲ್ಲಿದ್ದಾರೆ. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿ ಮೌನವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲು ಗ್ರಾಮಸ್ಥರು ಸಿದ್ಧತೆ ನಡೆಸುತ್ತಿದ್ದಾರೆ.
ಮಾಣಿ ಜಂಕ್ಷನ್ ಬಳಿಯಿರುವ ಕೋಳಿ ಅಂಗಡಿ, ಮೀನು ಅಂಗಡಿ, ಹೊಟೇಲ್ ಸೇರಿದಂತೆ ಇತರೆಡೆಗಳಿಂದ ಬರುವಂತಹ ತ್ಯಾಜ್ಯ ಮಿಶ್ರಿತ ಕೊಳಚೆ ನೀರು ಈ ಚರಂಡಿಯನ್ನು ಸೇರುತ್ತಿದೆ. ಮಾಣಿ ಪರಿಸರವಿಡೀ ಸೊಳ್ಳೆ ಉತ್ಪತ್ತಿ ಕೇಂದ್ರವಾಗಿ ಮಾರ್ಪಟ್ಟಿದೆ. ವಾರದ ಸಂತೆ ನಡೆಯುವ ಸಂತೆಕಟ್ಟೆ ಬಳಿಯಿರುವ ಚರಂಡಿಯೂ ಸಂಪೂರ,ವಾಗಿ ಹದಗೆಟ್ಟಿದ್ದು, ಚರಂಡಿಯೊಳಗೆ ಹುಳಗಳು ಎದ್ದು ಕಾಣುತ್ತಿದ್ದು, ಮಾರಕ ರೋಗದ ಬಗ್ಗೆ ಮುನ್ಸೂಚನೆ ನೀಡುತ್ತಿದೆ.
ಸ್ಥಳೀಯ ಗ್ರಾಮ ಪಂಚಾಯಿತಿನ ಸದಸ್ಯರೊಬ್ಬರು ಈ ಸಮಸ್ಯೆಯನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಇದು ಭರವಸೆಯಾಗಿಯೇ ಉಳಿದಿದೆ ಎನ್ನುತ್ತಾರೆ ಸ್ಥಳೀಯರು.
ಇಲ್ಲಿಯ ಚರಂಡಿ ಅವ್ಯವಸ್ಥೆಯಿಂದ ಮೊದಲೇ ರೋಸಿಹೋದ ಮಾಣಿ ಜನತೆ ಸುತ್ತಮುತ್ತಲಿನ ಹೊಟೇಲ್,ಗಳಲ್ಲಿ ಊಟ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಘಟನೆ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿನ ಗಮನಕ್ಕೆ ತಂದರೂ ಇದೂವರೆಗೂ ಯಾವುದೇ ಪರಿಹಾರ ದೊರೆತ್ತಿಲ್ಲ ಎಂಬ ಆರೋಪ ಸಾರ್ವಜನಿಕರದ್ದು.
ಮಾಣಿ ಜಂಕ್ಷನ್ ಬಳಿ ಯಾವುದೇ ಸಾರ್ವಜನಿಕ ಶೌಚಾಲಯ ಇಲ್ಲ. ಪರಿಣಾಮ ಕೆಲವರು ಚರಂಡಿಗೆ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿ ಮೂಗು ಮುಚ್ಚಿಕೊಂಡೇ ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಕೂಡಲೇ ಸಂಬಂಧಪಟ್ಟವರು ಎಚ್ಚೆತ್ತು ಇದಕ್ಕೊಂದು ಶಾಶ್ವತ ಪರಿಹಾರವನ್ನು ಕಲ್ಪಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

