ಬಿಜೆಪಿ ಆಡಳಿತದಲ್ಲಿ ಅಪರಾಧ ಪ್ರಕರಣ ಇಳಿಮುಖ:ಕ್ಯಾ. ಗಣೇಶ್ ಕಾರ್ಣಿಕ್
ಮಂಗಳೂರು: ಸಾಲ ಹಾಗೂ ಬಡ್ಡಿ ಪಾವತಿಸಿ, ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಸಾಮಾನ್ಯ ಆಡಳಿತದಲ್ಲಿ ಬಿಜೆಪಿ ಹೆಚ್ಚಿನ ಹಣ ವ್ಯಯಿಸಿದೆ. ಕಾಂಗ್ರೆಸ್ ಆಡಳಿತ ರಾಜ್ಯಕ್ಕಿಂತ ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ಅಪರಾಧ ಪ್ರಕರಣ ಕಡಿಮೆಯಾಗಿದೆ ಎಂದು ವಿಧಾನ ಪರಿಷತ್ತು ಸದಸ್ಯ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಅಂಕಿಅಂಶಗಳ ಸಹಿತ ವಿವರಿಸಿದರು.
2004-05ನೇ ಸಾಲಿಗೆ ಹೋಲಿಸಿದರೆ ಈ ಸಾಲಿನಲ್ಲಿ ಕಾಂಗ್ರೆಸ್ ಶೇ.80ರಷ್ಟು ಹೆಚ್ಚು ಹಣ ವಿಂಗಡಿಸಿದೆ. ಹಣದ ಸೋರಿಕೆಯನ್ನು ನಿಲ್ಲಿಸಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ರಾಜ್ಯದಲ್ಲಿ ಇಳಿಮುಖವಾಗಿದೆ. ಬಡತನ ನಿರ್ಮೂಲನೆಯಲ್ಲಿ ರಾಜ್ಯ ಮುನ್ನಡೆ ಸಾಧಿಸಿದ್ದು, ನಿರುದ್ಯೋಗ ಪ್ರಮಾಣದಲ್ಲಿ ಕಡಿತವಾಗಿದೆ ಎಂದರು.
ಮಾಧ್ಯಮ ಪ್ರಮುಖ್ ರಾಜಗೋಪಾಲ ರೈ ಹಾಜರಿದ್ದರು.
ಅಪಘಾತ: ಹೆಬ್ರಿ ಮೆಸ್ಕಾಂ ಅಧಿಕಾರಿ ಸಾವು
ಹೆಬ್ರಿ: ಹೆಬ್ರಿ ಮೆಸ್ಕಾಂ ವಿಭಾಗದ ಜೂನಿಯರ್ ಎಂಜಿನಿಯರ್ ಹೆಬ್ರಿ ಅನಂತಯ್ಯ ಆಚಾರ್ಯರ ಪುತ್ರ ದಯಾನಂದ ಆಚಾರ್ಯ (40) ಎಂಬವರು ಅಜೆಕಾರು ಸಮೀಪದ ಹಿರ್ಗಾನದಲ್ಲಿ ಬುಧವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಹೆಬ್ರಿ ಮೆಸ್ಕಾಂ ಸಬ್‌ಸ್ಟೇಷನ್‌ನಲ್ಲಿ ಅಧಿಕಾರಿಯಾಗಿದ್ದ ದಯಾನಂದ ಆಚಾರ್ಯರು ಅಜೆಕಾರು ಸೆಕ್ಷನ್‌ನಲ್ಲಿ ಪ್ರಭಾರ ಕರ್ತವ್ಯದಲ್ಲಿದ್ದು, ಹಿರ್ಗಾನದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹಿಡೆದು ಮುರಿದು ಬಿದ್ದಿದ್ದು ಸ್ಥಳ ಪರಿಶೀಲನೆ ನಡೆಸಿ ಬಳಿಕ ಹಿರಿಯ ಅಧಿಕಾರಿಗಳಿಗೆ ದೂರು ನೀಡಲು ಕಾರ್ಕಳಕ್ಕೆ ತೆರಳುತ್ತಿದ್ದರು.
ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು, ಬೈಕ್ ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
108 ಆ್ಯಂಬುಲೆನ್ಸ್ ಸ್ಥಳಕ್ಕೆ ಬರುವುದು ವಿಳಂಬವಾಗಿದ್ದು ಇದರಿಂದ ಮತ್ತಷ್ಟು ತೊಂದರೆಯಾಯಿತು ಎಂದು ಸ್ಥಳೀಯರು ದೂರಿದ್ದಾರೆ. 10 ವರ್ಷಗಳಿಂದ ಮೆಸ್ಕಾಂನಲ್ಲಿ ಅಧಿಕಾರಿಯಾಗಿದ್ದ ದಯಾನಂದ ಆಚಾರ್ಯರು ತಂದೆ, ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಸಹೋದರ, ಕಾಂಗ್ರೆಸ್ ಮುಖಂಡ ರಮೇಶ ಆಚಾರ್ಯ ಸೇರಿದಂತೆ ಹಲವರನ್ನು ಅಗಲಿದ್ದಾರೆ.
ಅಂತಿಮ ದರ್ಶನ: ಶಾಸಕ ಗೋಪಾಲ ಭಂಡಾರಿ, ಮುಖಂಡ ಪ್ರಸನ್ನ ಬಲ್ಲಾಳ್, ಜಿ.ಪಂ. ಸದಸ್ಯ ಮಂಜುನಾಥ ಪೂಜಾರಿ, ಮೆಸ್ಕಾಂ ಉಡುಪಿ ಜಿಲ್ಲಾ ಕಾರ್ಯನಿರ್ವಾಹಕ ಮುಖ್ಯಸ್ಥ ಗುರುರಾಜ್ ಸುವರ್ಣ, ಹಿರಿಯ ಅಧಿಕಾರಿಕಾರಿಗಳಾದ ನಾರಾಯಣ ನಾಯ್ಕ್, ಪ್ರತಾಪ ಶೆಟ್ಟಿ ಸೇರಿದಂತೆ ಮೆಸ್ಕಾಂ ಅಧಿಕಾರಿಗಳು ಜನಪ್ರತಿನಿಧಿಗಳು, ವಿಶ್ವಕರ್ಮ ಸಮಾಜದ ಮುಖಂಡರು ಸ್ಥಳೀಯ ಮುಖಂಡರು ಸೇರಿದಂತೆ ನೂರಾರು ಜನರು ಅಂತಿಮ ದರ್ಶನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

