ದಕ್ಷಿಣ ಕನ್ನಡ

ನಿಷೇಧಾಜ್ಞೆ ಜಾರಿ

Published On :

ಮಂಗಳೂರು: ಜಿಲ್ಲೆಯಲ್ಲಿ ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮೇ 3 ರಂದು ಸಂಜೆ 5 ರಿಂದ ಮೇ 6ರ ಬೆಳಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಗುಪ್ತ ಹೇಳಿದ್ದಾರೆ. ಆದ್ದರಿಂದ ಚುನಾವಣೆ ಅಂಗವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಗುಂಪು ಗುಂಪಾಗಿ ರ್ಯಾಲಿ ಮೂಲಕ ಮತಯಾಚಿಸುವುದನ್ನು ತಡೆಯಲಾಗಿದೆ. ಜಿಲ್ಲೆಯಲ್ಲಿ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು 5 ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ, ಬೀದಿ, ಓಣಿ ಕೇರಿಗಳಲ್ಲಿ , ಸಾರ್ವಜನಿಕ ಸ್ಥಳ, ಕಟ್ಟಡ ಮತ್ತು ಮತದಾನ ಕೇಂದ್ರಗಳ ಸುತ್ತಮುತ್ತ ಗುಂಪು ಸೇರುವುದನ್ನು ನಿಷೇಧಿಸಿದೆ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ ಇವುಗಳನ್ನು ಹೊಂದಿರುವುದನ್ನು ನಿಷೇಧಿಸಿದೆ. ಜಿಲ್ಲಾಧಿಕಾರಿ ಅನುಮತಿ ಪಡೆಯದೆ ಮೆರವಣಿಗೆ, ಸಾರ್ವಜನಿಕ ಸಭೆ, ಸಮಾರಂಭ, ಸಂಜ್ಞೆ, ಯಾವುದೇ  ಕೂಗನ್ನು ಉಚ್ಚರಿಸುವುದನ್ನು , ಚಿತ್ರಗಳ ಮೂಲಕ, ಪ್ರಕಟಣೆ ಮೂಲಕ ಪ್ರಸಾರ ಮಾಡುವುದನ್ನು, ಬಿತ್ತಿ ಪತ್ರ ಅಂಟಿಸುವುದನ್ನು ನಿಷೇಧಿಸಲಾಗಿದೆ. ನಾಲ್ಕು ಮತ್ತು ಅದಕ್ಕಿಂತ ಕಡಿಮೆ ಜನ ಮನೆ ಮನೆಗೆ ತೆರಳಿ ಮತಯಾಚಿಸುವುದಕ್ಕೆ ನಿರ್ಬಂಧವಿಲ್ಲ. ಈ ಆದೇಶವು ಸರ್ಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಮತ್ತು ಆರಕ್ಷಕ ಸಿಬ್ಬಂದಿಗಳು ಕಾರ್ಯ ನಿರ್ವಹಿಸಲು ಬಳಸುವ ಲಾಠಿಗೂ ಹಾಗೂ ಚುನಾವಣೆ ಕಾರ್ಯನಿರತ ಸಿಬ್ಬಂದಿಗಳಿಗೂ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೀಟಿ ವಿತರಣೆ
ವಿಳಂಬಗತಿ...
ಮೂಲ್ಕಿ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಗುರುತಿನಚೀಟಿ ವಿತರಣೆ ಮಂದಗತಿಯಲ್ಲಿ ಸಾಗುತ್ತಿದೆ. ಚುನಾವಣೆಗೆ ಕೇವಲ ಒಂದು ದಿನ ಬಾಕಿಯಿದ್ದು, ಈ ತನಕ ಶೇ.50 ವಿತರಣೆ ಕಾರ್ಯ ಮಾತ್ರ ಆಗಿದೆ.
ಈ ಹಿಂದಿನ ಚುನಾವಣೆಯಲ್ಲಿ ಮತದಾರರಿಗೆ ಗುರುತಿನ ಚೀಟಿಯನ್ನು ರಾಜಕೀಯ ಪಕ್ಷಗಳ ಕಾರ್ಯಕತರು ವಿತರಣೆ ಮಾಡುತ್ತಿದ್ದು ಈ ಬಾರಿ ಚುನಾವಣಾ ಆಯೋಗ ನೇರವಾಗಿ ವಿತರಣೆ ಮಾಡಲು ನಿರ್ಧರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.