ಇಂದಿನಿಂದ ವಾಲಿಬಾಲ್, ಕಬಡ್ಡಿ ತರಬೇತಿ ಶಿಬಿರ
ಸುಬ್ರಹ್ಮಣ್ಯ: ಸುಳ್ಯ ತಾಲೂಕು ವಾಲಿಬಾಲ್ ಮತ್ತು ಕಬಡ್ಡಿ ಅಸೋಸಿಯೇಷನ್ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ, ಅನುಗ್ರಹ ಎಜ್ಯುಕೇಶನ್ ಟ್ರಸ್ಟ್, ಪ್ರಶಾಂತ್ ಸ್ಪೋಟ್ಸ್ ಕ್ಲಬ್ ಸುಬ್ರಹ್ಮಣ್ಯ, ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ 6 ರಿಂದ 20ರವರೆಗೆ ವಾಲಿಬಾಲ್ ಮತ್ತು ಕಬಡ್ಡಿ ತರಬೇತಿ ಶಿಬಿರ ಸುಬ್ರಹ್ಮಣ್ಯ ಎಸ್.ಎಸ್. ಪಿ.ಯು. ಕಾಲೇಜಿನಲ್ಲಿ ನಡೆಯಲಿದೆ ಎಂದು ಶಿಬಿರದ ಸಂಚಾಲಕ ಶಿವರಾಮ ಏನೆಕಲ್ ತಿಳಿಸಿದರು. ಸುಬ್ರಹ್ಮಣ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹದಿನೈದು ದಿನ ನಡೆಯುವ ವಾಲಿಬಾಲ್ ಮತ್ತು ಕಬಡ್ಡಿ ತರಬೇತಿ ಶಿಬಿರದಲ್ಲಿ ವಾಲಿಬಾಲ್ನ ಅಂತಾರಾಷ್ಟ್ರೀಯ ತರಬೇತುದಾರ ನಾರಾಯಣ ಆಳ್ವ ಹಾಗೂ ರಾಷ್ಟೀಯ ಕಬಡ್ಡಿ ತರಬೇತುದಾರ ಮಾಧವ ಬಿ.ಕೆ. ಶಿಬಿರಾರ್ಥಿಗಳಿಗೆ ತರಬೇತಿ ನೀಡಲಿದ್ದಾರೆ. ಶಿಬಿರದಲ್ಲಿ ಪ್ರಾಥಮಿಕ, ಪ್ರೌಢ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಪದವಿ ಹಂತದವರೆಗೆ ಅವಕಾಶ ನೀಡಲಾಗುತ್ತದೆ ಎಂದರು. ಶಿಬಿರದಲ್ಲಿ ಸಾರ್ವಜನಿಕ ಪುರುಷರಿಗೆ ಮತ್ತು ಮಹಿಳೆಯರಿಗೆ ಭಾಗವಹಿಸುವ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಘಟಕರನ್ನು ಸಂಪರ್ಕಿಸುವಂತೆ ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

