ಇಂದು ಮತ ಎಣಿಕೆ: ಜಿಲ್ಲಾಡಳಿತ ಸಜ್ಜು
ಮಂಗಳೂರು: ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜಾಗಿದ್ದು, ಎಣಿಕಾ ಕೇಂದ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಅವರ ಎಣಿಕಾ ಒಬ್ಬ ಏಜೆಂಟ್ ಮಾತ್ರ ಮೊಬೈಲ್ ಕೊಂಡೊಯ್ಯಲು ಅವಕಾಶವಿದೆ. ಎಣಿಕಾ ಕೇಂದ್ರದ ಆವರಣದಲ್ಲಿ ಓಡಾಡುತ್ತಾ ಮಾತಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಗುಪ್ತ ಹೇಳಿದ್ದಾರೆ.
ಮಂಗಳವಾರ ಕೆನರಾ ಕಾಲೇಜಿನಲ್ಲಿ ನಡೆದ ಸಿದ್ಧತೆಯ ಅಂತಿಮ ಸುತ್ತಿನ ಅಣುಕು ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದರು.
ಮತ ಎಣಿಕಾ ಕೇಂದ್ರದಲ್ಲಿ ಮೊಬೈಲ್ ಬಳಕೆಗೆ ಚುನಾವಣಾ ಅಧಿಕಾರಿಗಳು, ವೀಕ್ಷಕರು, ಜಿಲ್ಲಾ ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಮಾತ್ರ ಅವಕಾಶ ಎಂದರು.
ಮಾಧ್ಯಮ ಪ್ರತಿನಿಧಿಗಳು ಮೊಬೈಲ್ನ್ನು ಮಾಧ್ಯಮ ಕೊಠಡಿಯಲ್ಲಿ ಮಾತ್ರ ಬಳಸಬಹುದಾಗಿದೆ. ಮತ ಯಂತ್ರವನ್ನು ಭದ್ರತಾ ಕೊಠಡಿಯಿಂದ ಎಣಿಕಾ ಕೇಂದ್ರಕ್ಕೆ ಸಾಗಿಸುವ, ಅದನ್ನು ತೆರೆದು ಎಣಿಕೆ ಮಾಡುವ ಎಲ್ಲ ಪ್ರಕ್ರಿಯೆಗಳನ್ನು ವಿಡಿಯೋ ಕ್ಯಾಮರಾ ಮೂಲಕ ದಾಖಲಿಸುವುದಾಗಿ ಹೇಳಿದರು. ಸಹಾಯಕ ಚುನಾವಣಾಧಿಕಾರಿಗಳ ನಿರ್ಧಾರವೇ ಅಂತಿಮ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

