ದಕ್ಷಿಣ ಕನ್ನಡ

ಎಸ್ಸೆಸ್ಸೆಲ್ಸಿ: ಬೆಳ್ತಂಗಡಿ ತಾಲೂಕಿಗೆ ಶೇ.83.61

Published On :

ಬೆಳ್ತಂಗಡಿ: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಶೇ.83.61 ಫಲಿತಾಂಶ ಬಂದಿದೆ.
ಒಟ್ಟು 53 ಪ್ರೌಢ ಶಾಲೆಗಳಲ್ಲಿ ಸರ್ಕಾರಿ ಶಾಲೆಗಳು 33 ಇದ್ದು, ಶೇ.76.64 ಫಲಿತಾಂಶ ದಾಖಲಿಸಿವೆ. ಅನುದಾನಿತ ಶಾಲೆಗಳು 9 ಇದ್ದು, ಶೇ.91 ಹಾಗೂ ಅನುದಾನ ರಹಿತ ಶಾಲೆಗಳು 11 ಇದ್ದು, ಶೇ.99.65 ಫಲಿತಾಂಶವನ್ನು ಪಡೆದಿವೆ. ಒಟ್ಟು 12 ಶಾಲೆಗಳು ಶೇ.100 ಉತ್ತೀರ್ಣತೆಯನ್ನು ದಾಖಲಿಸಿವೆ.
ವೈಷ್ಣವಿ ತಾಲೂಕಿಗೆ ಪ್ರಥಮ: ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವೈಷ್ಣವಿ ಎಂ. 612 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಎಸ್‌ಡಿಎಂ ಧರ್ಮಸ್ಥಳ ಶಾಲೆಯ ರಕ್ಷಿತಾ ಎಂ. (605) ಪಡೆದಿದ್ದಾರೆ. ತೃತೀಯ ಸ್ಥಾನವನ್ನು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶುಭಾಶೈ ಶೆಟ್ಟಿ (602) ಹಾಗೂ ಎಸ್‌ಡಿಎಂ ಸೆಕೆಂಡರಿ ಶಾಲೆಯ ಶ್ರದ್ಧಾ ಕೆ.ಎಸ್. (602) ಪಡೆದಿದ್ದಾರೆ. ಸರ್ಕಾರಿ ಪ್ರೌಢ ಶಾಲೆ ಪಡಂಗಡಿ ಶೇ. 53.52 ರಷ್ಟು ಅತಿ ಕಡಿಮೆ ಫಲಿತಾಂಶ ಪಡೆದಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 4051 ವಿದ್ಯಾರ್ಥಿಗಳು ಕುಳಿತಿದ್ದು, ಅವರಲ್ಲಿ 3,387 ಉತ್ತೀರ್ಣರಾಗಿದ್ದಾರೆ. ಈ ಪೈಕಿ 1627 ಬಾಲಕರು, 1760 ಬಾಲಕಿಯರು. 160 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 1241 ಮಂದಿ ಪ್ರಥಮ, 801 ದ್ವಿತೀಯ, 1185 ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಶೇ.100 ಫಲಿತಾಂಶ: ಶೇ.100 ಫಲಿತಾಂಶ ಪಡೆದ ತಾಲೂಕಿನ 12 ಪ್ರೌಢಶಾಲೆಗಳು: ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಡಾಜೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ, ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆ ಉಜಿರೆ, ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ನಿಟ್ಟಡೆ, ರೆಹಮಾನಿಯ ಪ್ರೌಢಶಾಲೆ ಕಾಜೂರು, ಎಸ್‌ಡಿಎಂ ಧರ್ಮಸ್ಥಳ, ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆ, ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರು, ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ, ಸೈಂಟ್ ಮೇರಿಸ್ ಪ್ರೌಢ ಶಾಲೆ ಲಾಯಿಲ, ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೇಕೋಟೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.