ದೇವಸ್ಥಾನ ಸಂಸ್ಕಾರ ನೀಡುವ ಕೇಂದ್ರ: ಕೃಷ್ಣ ಪ್ರಸಾದ್ ಮಡ್ತಿಲ
ಪುತ್ತೂರು: ದೇವಸ್ಥಾನ ಸಂಸ್ಕಾರ ನೀಡುವ ಕೇಂದ್ರವಾಗಿದ್ದು, ನಾವು ಮಾಡುವ ಕರ್ಮದಿಂದ ಧರ್ಮ ಉಳಿಯಲಿದೆ ಹಾಗೂ ಮಾನವ ಸಮಾಜದಲ್ಲಿ ನೆಮ್ಮದಿಯ ಬಾಳನ್ನು ನಡೆಸಲು ಸಾಧ್ಯವಿದೆ ಎಂದು ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣ ಪ್ರಸಾದ್ ಮಡ್ತಿಲ ಹೇಳಿದ್ದಾರೆ.
ಸೋಮವಾರ ರಾತ್ರಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ 2ನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಟಪಾಡಿ ಆನೆಗುಂದಿ ಜಗದ್ಗುರು ಮಹಾಸಂಸ್ಥಾನದ ಅಷ್ಟೋತ್ತರ ಶತ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ, ನಿರೀಕ್ಷೆ ಮಾಡದ ರೀತಿಯಲ್ಲಿ ಕರಸೇವೆ, ದೇವಸ್ಥಾನದಲ್ಲಿರುವ ಶಿಲಾಮಯ, ಕಾಷ್ಟಶಿಲ್ಪ ಇದನ್ನೆಲ್ಲ ನೋಡಿದಾಗ ಕರಾವಳಿಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪರ್ಯಾಯವಾಗಿ ಇನ್ನೊಂದು ದೇವಸ್ಥಾನವಿಲ್ಲ ಎಂದರು.
ಪತ್ರಕರ್ತ ಮನೋಹರ್ ಪ್ರಸಾದ್ ಧಾರ್ಮಿಕ ಭಾಷಣ ಮಾಡಿದರು. ವೇದಿಕೆಯಲ್ಲಿ ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮೀಜಿ, ಮೇನಾಲ ಗುತ್ತು ಜಲಧರ ರೈ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಡಾ. ಸುಧಾ ಎಸ್. ರಾವ್, ಕಾರ್ಯ ನಿರ್ವಹಣಾಧಿಕಾರಿ ಸಿ.ಯು. ಪೂವಪ್ಪ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು, ಪ್ರಧಾನ ಕಾರ್ಯದರ್ಶಿ ಚನಿಲ ತಿಮ್ಮಪ್ಪ ಶೆಟ್ಟಿ ಇದ್ದರು.
ಸ್ವಾಗತ ಸಮಿತಿ ಉಪಾಧ್ಯಕ್ಷ ಚಿದಾನಂದ ಬೈಲಾಡಿ ವಂದಿಸಿದರು. ಪ್ರೊ. ವಿಜಯ ಮೊಳೆಯಾರ್ ಮತ್ತು ಡಾ.ರಾಜೇಶ್ ಬೆಜ್ಜಂಗಳ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಸನಾತನ ನಾಟ್ಯಾಲಯ ಮಂಗಳೂರು ಅವರಿಂದ ರಾಷ್ಟ್ರದೇವೋಭವ ಕಾರ್ಯಕ್ರಮ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

