ದಕ್ಷಿಣ ಕನ್ನಡ

ಮಕ್ಕಳ ರಂಗನಾಟಕ ಕಾರ್ಯಾಗಾರ

Published On :

ಬಂಟ್ವಾಳ: ಮಂಚಿಯಲ್ಲಿ ಇತ್ತೀಚೆಗೆ ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್‌ನ ಆಶ್ರಯದಲ್ಲಿ, ಶಿವಮೊಗ್ಗ ರಂಗಾಯಣ, ಬಿ.ವಿ. ಕಾರಂತ ರಂಗಶಾಲೆ ಮಂಚಿ- ಕುಕ್ಕಾಜೆ ಹಾಗೂ ಸಮಸಾಂಪ್ರತಿ ವಿಟ್ಲ ಇದರ ಆಶ್ರಯದಲ್ಲಿ ಆರಂಭಗೊಂಡ ಮಕ್ಕಳ ರಂಗನಾಟಕ ಕಾರ್ಯಾಗಾರವನ್ನು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ ಉದ್ಘಾಟಿಸಿದರು.
    ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಶಾಂತಲಾ ಎನ್. ಭಟ್ ಅಧ್ಯಕ್ಷತೆ ವಹಿಸಿದ್ದರು. ಕುಕ್ಕಾಜೆ ಶಾಲಾ ಮುಖ್ಯೋಪಾಧ್ಯಾಯ ಬಿ. ಮಹಮ್ಮದ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ್ ಕೆ. ಮುಖ್ಯ ಅತಿಥಿಯಾಗಿ ಪಾಲ್ಗೊಂಡರು. ಶಿಬಿರ ನಿರ್ದೇಶಕ, ರಂಗಕರ್ಮಿ ಮೂರ್ತಿದೇರಾಜೆ ಕಾರ್ಯಾಗಾರದ ರೂಪುರೇಷೆಗಳನ್ನು ವಿವರಿಸಿದರು. ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್‌ನ ಅಧ್ಯಕ್ಷ ರಾಮಚಂದ್ರ ಭಟ್ ಕಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಗಣೇಶ್ ಐತಾಳ್ ಸ್ವಾಗತಿಸಿ, ಶಾರದಾ ಎಸ್. ರಾವ್ ವಂದಿಸಿದರು. ಉಮಾನಾಥ ರೈ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ವಜ್ರಾಕ್ಷ ಮಲ್ಲಿ, ಬಾಲಕೃಷ್ಣ ಶೆಟ್ಟಿ ಮತ್ತಿತರರು ಇದ್ದರು.
ಉದ್ಘಾಟನಾ ಸಮಾರಂಭದ ಬಳಿಕ ಮಂಚಿ ಸರ್ಕಾರಿ ಪ್ರೌಢಶಾಲಾ ಮಕ್ಕಳಿಂದ ಮೋಹನ್ ಶೇಣಿ ನಿರ್ದೇಶನದಲ್ಲಿ ಕೆಂಪು ಹೂ ನಾಟಕ ಪ್ರದರ್ಶನಗೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.