ದಕ್ಷಿಣ ಕನ್ನಡ

ಸಂಪಾಜೆ, ಹರಿಹರ ಪಲ್ಲತ್ತಡ್ಕ ಕಾಲೇಜ್‌ಗೆ ಶೇ.100

Published On :

ಸುಳ್ಯ: ಸುಳ್ಯ ತಾಲೂಕಿನಾದ್ಯಂತ ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಬರೆದ ಕಾಲೇಜ್‌ಗಳ ವಿವರ ಇಂತಿದೆ. ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು- ವಿಜ್ಞಾನ ವಿಭಾಗದಲ್ಲಿ 60 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದ ಇಲ್ಲಿ 59 ಮಂದಿ ಉತ್ತೀರ್ಣರಾಗಿದ್ದು, ಶೇ. 98 ಫಲಿತಾಂಶ ದಾಖಲಾಗಿದೆ. 11 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯನ್ನು ಪಡೆದಿದ್ದಾರೆ. ಕಲಾ ವಿಭಾಗದಲ್ಲಿ- 46 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 97 ಫಲಿತಾಂಶ ದಾಖಲಾಗಿದೆ.  ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯ- ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 76 ಮಂದಿಯಲ್ಲಿ 67 ಮಂದಿ ಉತ್ತೀರ್ಣರಾಗಿದ್ದಾರೆ. ಇಬ್ಬರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದವರು 63. ಉತ್ತೀರ್ಣ- 59, ಶೇ. 3 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ದಾಖಲಾಗಿದ್ದಾರೆ. ಕಂಪ್ಯೂಟರ್ ಸಯನ್ಸ್ ವಿಭಾಗದಲ್ಲಿ ಪರೀಕ್ಷೆಗೆ 80 ಮಂದಿ ಹಾಜರಾಗಿದ್ದು ಶೇ. 100 ಫಲಿತಾಂಶ ದಾಖಳಾಗಿದೆ. 3 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ 102 ಮಂದಿ ಹಾಜರಾಗಿದ್ದು, 83 ಮಂದಿ ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂಪಾಜೆ- ಕಲಾ ವಿಭಾಗವನ್ನು ಮಾತ್ರ ಹೊಂದಿರುವ ಇಲ್ಲಿ ಪರೀಕ್ಷೆಗೆ ಹಾಜರಾಗಿದ್ದು 49 ಮಂದಿ. ಶೇ. 100 ಫಲಿತಾಂಶ ಇಲ್ಲಿ ದಾಖಲಾಗಿದೆ. ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು, ಸುಳ್ಯ- ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದವರು- 75. ಉತ್ತೀರ್ಣ- 55, ಇಬ್ಬರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗ (ಎಸ್‌ಇಬಿಎ)ದಲ್ಲಿ ಪರೀಕ್ಷೆಗೆ ಹಾಜರಾದವರು- 62. ಉತ್ತೀರ್ಣ- 56. ಆರು ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗ (ಸಿಇಬಿಎ)ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದವರು- 43, 35 ಮಂದಿ ಉತ್ತೀರ್ಣರಾಗಿದ್ದು, 3 ಮಂದಿ ವಿಶಿಷ್ಟ ಶ್ರೇಣಿ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ 29 ಮಂದಿ ಹಾಜರಾಗಿದ್ದು, 23 ಮಂದಿ ಉತ್ತೀರ್ಣರಾಗಿದ್ದಾರೆ. ಹರಿಹರ ಪಲ್ಲತ್ತಡ್ಕ ಪದವಿಪೂರ್ವ ಕಾಲೇಜು- ಕಲಾ ವಿಭಾಗ ಶೇ.100 ಫಲಿತಾಂಶ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.