ದಕ್ಷಿಣ ಕನ್ನಡ

ಮೂಡುಬಿದಿರೆಗೆ ಮಿನಿ ವಿಧಾನಸೌಧ, ಮೂಲ್ಕಿಗೆ ವಿಶೇಷ ತಹಸೀಲ್ದಾರ್: ಜೈನ್ ಭರವಸೆ

Published On :

ಮೂಲ್ಕಿ: ನಿರಂತರ ನಾಲ್ಕನೇ ಬಾರಿಗೆ ಮೂಡುಬಿದಿರೆ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಆಯ್ಕೆಯಾದ ಕೆ. ಅಭಯಚಂದ್ರ ಜೈನ್ ಅವರು ಜಾತಿ ಬೇಧ ಮರೆತು ತನ್ನನ್ನು ಗೆಲ್ಲಿಸಿದ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.  ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯದಿಂದ ಬಂದ ತನ್ನನ್ನು ಎಲ್ಲಾ ಸಮುದಾಯದವರು ಕಳೆದ 14 ವರ್ಷಗಳಿಂದ ನಿರಂತರವಾಗಿ ಬೆಂಬಲಿಸುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿರುವ ಅವರು, ತನ್ನ ವಿರುದ್ಧ ಪ್ರಮುಖ ಪಕ್ಷವು ಹೆಚ್ಚಿನ ಸಂಖ್ಯೆಯನ್ನು ಹೊಂದಿರುವ ಸಮುದಾಯದ ಅಭ್ಯರ್ಥಿಯನ್ನು ನಿಲ್ಲಿಸಿದ್ದು ಜತೆಗೆ ತನ್ನ ಹೆಸರನ್ನೇ  ಹೋಲುವ ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ತನ್ನ ಗೆಲುವಿಗೆ ಪೂರಕವಾಯಿತು. ತನ್ನ ಮುಂದಿನ ಅವಧಿಯಲ್ಲಿ ಮೂಡುಬಿದಿರೆಯಲ್ಲಿ ಮಿನಿ ವಿಧಾನ ಸೌಧ ನಿಮಾಣ, ಮೂಲ್ಕಿಗೆ ವಿಶೇಷ ತಹಸೀಲ್ದಾರ್ ನೇಮಕ, ಮೂಲ್ಕಿ ತಾಲೂಕು ರಚನೆಗೆ ಒತ್ತಡ, ಮೂಡುಬಿದಿರೆಗೆ ಬೈಪಾಸ್ ರಸ್ತೆ, ಮೂಲ್ಕಿ ಮೂಡುಬಿದಿರೆ ಒಳಚರಂಡಿ ಯೋಜನೆ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ನೀರಿನ ಸಮಸ್ಯೆ ಪರಿಹಾರಕ್ಕೆ ಯತ್ನ, ಬಡವರಿಗೆ ಆಶ್ರಯ ಮನೆ ನಿರ್ಮಾಣ,ನಿವೇಶನ ರಹಿತರಿಗೆ ನಿವೇಶನ, ಅರ್ಹರಿಗೆ ಪಡಿತರ ಚೀಟಿ ವಿತರಣೆ, ಪಡಿತರ ಚೀಟಿಯ ಗೊಂದಲ ನಿವಾರಣೆ, ಹಳಿಯಾಳಿಯಲ್ಲಿ ಜ್ಯೂನಿಯರ್ ಕಾಲೇಜು ಸ್ಥಾಪನೆ, ಮೂಡುಶೆಡ್ಡೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಕ್ಷೇತ್ರದ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವುದಾಗಿ ಅಭಯಚಂದ್ರ ಜೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.