ದಕ್ಷಿಣ ಕನ್ನಡ

ಅಂತರಂಗದ ಬೆಳಕು ಬೇಕು: ಸ್ವಾಮೀಜಿ

Published On :

ಪುತ್ತೂರು: ಅಂತರಂಗದ ಬೆಳಕೇ ಜ್ಞಾನದ ಜ್ಯೋತಿಯಾಗಿದೆ. ಬಾಹ್ಯದೊಳಗಿನ ದೇವಾಲಯವನ್ನು ಅಂತರಂಗದಿಂದ ನೋಡುವ ಕೆಲಸವಾಗಬೇಕು ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನಮ್‌ನ ಶ್ರೀಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ 4ನೇ ದಿನವಾದ ಬುಧವಾರ ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಚಿಕ್ಕಮಗಳೂರಿನ ವೇದವಿಜ್ಞಾನ ಮಂದಿರದ ಕೆ.ಎಸ್. ನಿತ್ಯಾನಂದ ಶುಭ ಹಾರೈಸಿದರು. ವಿ.ಬಿ. ಹಿರಣ್ಯ ವೆಂಕಟೇಶ್ ಭಟ್ ಧಾರ್ಮಿಕ ಉಪನ್ಯಾಸ ನೀಡಿದರು. ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಚನಿಲ ತಿಮ್ಮಪ್ಪ ಶೆಟ್ಟಿ, ವೈದ್ಯ ಡಾ. ಶ್ರೀಪತಿ ರಾವ್, ದೇವಸ್ಥಾನ ಆಡಳಿತಾಧಿಕಾರಿ ಸಿ.ಯು. ಪೂವಪ್ಪ, ಪ್ರಧಾನ ಅರ್ಚಕ ವೆಂಟೇಶ್ವರ ಭಟ್ ವೇದಿಕೆಯಲ್ಲಿದ್ದರು. ಬ್ರಹ್ಮಕಲಶೋತ್ಸವ ಸಮನ್ವಯ ಸಮಿತಿ ಕಾರ್ಯದರ್ಶಿ ಬಂಗಾರಡ್ಕ ವಿಶ್ವೇಶ್ವರ ಭಟ್ ಸ್ವಾಗತಿಸಿದರು. ಲೆಕ್ಕಪತ್ರ ಸಮಿತಿ ಸದಸ್ಯ ವಾಟೆಡ್ಕ ಕೃಷ್ಣ ಭಟ್ ವಂದಿಸಿದರು. ಶಿಕ್ಷಕಿ ವಾರಿಜಾ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಬೆಂಗಳೂರಿನ ಸುರೇಖಾ ಕೆ.ಎಸ್. ಮತ್ತು ತಂಡದಿಂದ ಗಾನ ನಿನಾದ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.