ದಕ್ಷಿಣ ಕನ್ನಡ

ಎಸ್ಸೆಸ್ಸೆಲ್ಸಿ: ಕೊನೆಗೂ ಗ್ಲೆನಿಟಾ ರೀಮಾ ಪಿಂಟೊ ಜಿಲ್ಲೆಗೆ ದ್ವಿತೀಯ

Published On :

ಉಡುಪಿ: ಎಸ್ಸೆಸ್ಸೆಲ್ಸಿ ಪರೀಕ್ಷಾ ಮೌಲ್ಯಮಾಪನ ಸಂದರ್ಭದಲ್ಲಿ ನಡೆದ ಬೇಜವಾಬ್ದಾರಿಯಿಂದಾಗಿ ತೊಂದರೆಗೀಡಾಗಿದ್ದ ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಫ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೊನೆಗೂ ನ್ಯಾಯ ಸಿಕ್ಕಿದೆ.
 ವಿದ್ಯಾರ್ಥಿಗಳಾದ ಗ್ಲೆನಿಟಾ ರೀಮಾ ಪಿಂಟೊ ಮತ್ತು ಶೀತಲ್ಲೀಷಾ ರೇಂಜಲ್ ಅವರಿಬ್ಬರಿಗೆ ಕನ್ನಡ ಭಾಷಾ ವಿಷಯದಲ್ಲಿ 125ಕ್ಕೆ 138 ಅಂಕಗಳನ್ನು ನೀಡಲಾಗಿತ್ತು. ಅಲ್ಲದೇ ಇಬ್ಬರ ಫಲಿತಾಂಶವನ್ನು ಪರೀಕ್ಷಾ ಮಂಡಳಿ ತಡೆ ಹಿಡಿದಿದ್ದು ಅನವಶ್ಯಕ ಆತಂಕಕ್ಕೆ ಕಾರಣವಾಗಿತ್ತು. ಈ ಬಗ್ಗೆ 'ಕನ್ನಡಪ್ರಭ' ವಿಶೇಷ ವರದಿಯನ್ನು ಪ್ರಕಟಿಸಿತ್ತು.
 ಇದೀಗ ಇಬ್ಬರಿಗೂ ಕನ್ನಡದಲ್ಲಿ 125ರಲ್ಲಿ 124 ಅಂಕಗಳನ್ನು ನೀಡಲಾಗಿದೆ. ಇದರೊಂದಿಗೆ ಗ್ಲೆನಿಟಾ ರೀಮಾ ಪಿಂಟೊ ಅವರು ಪಡೆದ ಒಟ್ಟು ಅಂಕಗಳು 612 ಆಗಿದ್ದು, ಅವರು ಈಗ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನಿಯಾಗಿದ್ದಾರೆ.
 ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿದ ಶಿಕ್ಷಣ ಇಲಾಖೆ ಹಾಗೂ ಪರೀಕ್ಷಾ ಮಂಡಳಿಗೆ ಶಾಲಾ ಸಂಚಾಲಕರು, ಮುಖ್ಯೋಪಾಧ್ಯಾಯರು ಮತ್ತು ವಿದ್ಯಾರ್ಥಿನಿಯ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.