ದಕ್ಷಿಣ ಕನ್ನಡ

ರಾಜೇಂದ್ರ ಕುಮಾರ್‌ಗೆ ಮದರ್ ತೆರೆಸಾ ಪ್ರಶಸ್ತಿ

Published On :

ಮಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಾಗೂ ನವೋದಯ ಸ್ವಸಹಾಯ ಸಂಘಗಳ ಸಂಘಟನೆಯಲ್ಲಿ ಕ್ರಿಯಾಶೀಲರಾಗಿ ಸೇವೆ ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್  ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್‌ಗೆ ಪ್ರತಿಷ್ಠಿತ ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿಯನ್ನು ಹೊಸದಿಲ್ಲಿಯಲ್ಲಿ ಪ್ರದಾನ ಮಾಡಲಾಯಿತು. ದಿಲ್ಲಿಯ ಪ್ರತಿಷ್ಠಿತ ಗ್ಲೋಬಲ್ ಅಚೀವರ್ಸ್ ಫೌಂಡೇಶನ್ ನಾನಾ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿದೆ. ದಿಲ್ಲಿಯಲ್ಲಿ ಸೋಮವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಜಲಸಂಪನ್ಮೂಲ ಸಚಿವ ಹರೀಶ್ ರಾವತ್ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ರಿಪಬ್ಲಿಕ್ ಅಫ್ ಸೆಶೆಲ್ಸ್ ಹೈ ಕಮಿಷನರ್ ವೆವೆನ್ ವಿಲಿಯಮ್ಸ್, ಸಿಬಿಐ ಮಾಜಿ ನಿರ್ದೇಶಕ ಸರ್ದಾರ್ ಜೋಗಿಂದರ್ ಸಿಂಗ್, ಹನ್ಸ್ ಲೋಕ್ ಫೌಂಡೇಶನ್‌ನ ಗುರುಮಾತಾ ಮಂಗಲ್‌ಜೀ, ಸಂಸದ ಕುನ್‌ವರ್‌ಜೀ ಬಾಯಿ, ಹರಿಪಾಲ್ ರಾವತ್, ಪದ್ಮಶ್ರೀ ಜಸ್ಪಾಲ್ ರಾಣಾ, ಗ್ಲೋಬಲ್ ಅಚೀವರ್ಸ್ ಅಧ್ಯಕ್ಷ ದಯಾ ಕಿಶನ್, ಕಾರ್ಯದರ್ಶಿ ಎ.ಕೆ.ಶರ್ಮ, ಚೀಫ್ ಎಕ್ಸಿಕ್ಯೂಟೀವ್ ಟಿ.ಆರ್.ಕುಮಾರ್ ಇದ್ದರು. ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಆಗಿರುವ ರಾಜೇಂದ್ರ ಕುಮಾರ್, ಈಗಾಗಲೇ ಹಲವು ಪ್ರಶಸ್ತಿ ಸ್ವೀಕರಿಸಿದ್ದಾರೆ. 25 ವರ್ಷಗಳಲ್ಲಿ ಸಹಕಾರಿ ಕ್ಷೇತ್ರದ ಉನ್ನತಿಗೆ ಕೊಡುಗೆ ನೀಡಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ 19 ವರ್ಷದಿಂದ ಅಭಿವೃದ್ಧಿ ಪಥದತ್ತ ಮುನ್ನಡೆಸಿದ್ದಾರೆ. ಈ ಅವಧಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ 14 ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 11 ಬಾರಿ ನಬಾರ್ಡ್ ಪ್ರಶಸ್ತಿ ದೊರೆತಿದೆ. ಈ ಸಾಧನೆ ಗುರುತಿಸಿ ಪ್ರಶಸ್ತಿ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.