ಇಎಸ್‌ಐ ಆಸ್ಪತ್ರೆ ವಿರುದ್ಧ ಉಪವಾಸ ಸತ್ಯಾಗ್ರಹ
ಮಂಗಳೂರು: ನಗರದಲ್ಲಿರುವ ಇಎಸ್‌ಐ ಕಾರ್ಮಿಕ ಆಸ್ಪತ್ರೆಯ ಸೌಲಭ್ಯ ಸುಧಾರಣೆಗೆ ಆಗ್ರಹಿಸಿ ಅಖಿಲ ಭಾರತ ಕಾರ್ಮಿಕ ಸಂಘ ಭಾನುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದೆ. ಕೊಟ್ಟಾರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಕಾರ್ಮಿಕರು ಬಳಿಕ ಉಪವಾಸ ಸತ್ಯಾಗ್ರಹಕ್ಕೆ ಮುಂದಾದರು. ಕಾರ್ಮಿಕ ಸಂಘ ಸ್ಥಾಪಕಾಧ್ಯಕ್ಷ ಸುದತ್ ಜೈನ್ ಸತ್ಯಾಗ್ರಹ ನೇತೃತ್ವ ವಹಿಸಿದ್ದಾರೆ.
ಏನೇನು ಬೇಡಿಕೆ?: ಇಎಸ್‌ಐ ಆಸ್ಪತ್ರೆ ಅಧೀಕ್ಷಕರನ್ನು ಬದಲಾಯಿಸಬೇಕು, ಇಎಸ್‌ಐ ಆಸ್ಪತ್ರೆಯನ್ನು ಪೂರ್ತಿಯಾಗಿ ಕೇಂದ್ರ ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು, ಮಂಗಳೂರಿನಲ್ಲಿ ಬೀಡಿ ಕಾರ್ಮಿಕರ ಆಸ್ಪತ್ರೆ ಸ್ಥಾಪಿಸಬೇಕು, ಕಾರ್ಮಿಕ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿಗೊಳಿಸಬೇಕು, ಕಾರ್ಮಿಕರಿಗೆ ಸವಲತ್ತು ನೀಡಬೇಕು, ಶಿರ್ತಾಡಿ ಗ್ರಾಪಂಯ ಕೊಣಾಜೆಕಲ್ಲು ರಸ್ತೆ ಡಾಂಬರೀಕರಣ ಮಾಡಬೇಕು ಎಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಒಟ್ಟು 57 ಬೇಡಿಕೆಗಳಿದ್ದು, ಇವುಗಳ ಈಡೇರಿಕೆಗೆ 12 ಮಂದಿ ವಿವಿಧ ಇಲಾಖೆಗಳ ಅಧಿಕಾರಿಗಳು ಭರವಸೆ ನೀಡಬೇಕು. ಈ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಳೆದ 3 ವರ್ಷದಿಂದ ಸಂಬಂಧಿತರಿಗೆ ಮನವಿ ನೀಡುತ್ತಿದ್ದರೂ ಪ್ರಯೋಜನವಾಗಿಲ್ಲ.
ಜಿಲ್ಲಾಧಿಕಾರಿಗೆ ಜನವರಿಯಲ್ಲಿ ಮತ್ತು ಏಪ್ರಿಲ್‌ನಲ್ಲಿ ಪುನಾ ಮನವಿ ಸಲ್ಲಿಸಲಾಗಿದೆ. ಬೇಡಿಕೆ ಈಡೇರಿಸುವವರೆಗೂ ಸತ್ಯಾಗ್ರಹ ಮುಂದುವರಿಸುವುದಾಗಿ ಸುದತ್ ಜೈನ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

