ದಕ್ಷಿಣ ಕನ್ನಡ

ಬಸವಣ್ಣ ಜೀವನ ಮೌಲ್ಯ ಅಳವಡಿಸಿಕೊಳ್ಳಿ'

Published On :

ಪುತ್ತೂರು: ಕಾಯಕವೇ ಕೈಲಾಸ ಎಂದು ನುಡಿದ ಬಸವಣ್ಣನವರ ಜೀವನ ಮೌಲ್ಯವನ್ನು ಪ್ರಸ್ತುತ ಬದುಕಿನಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಪುತ್ತೂರು ತಾಲೂಕು ಪಂಚಾಯಿತಿ ಅಧ್ಯಕ್ಷೆ ಶಶಿಪ್ರಭಾ ಸಂಪ್ಯ ತಿಳಿಸಿದರು.
ಅವರು ಸೋಮವಾರ ಪುರಸಭಾ ಕಾರ್ಯಾಲಯದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಚನ ಸಾಹಿತ್ಯವನ್ನು ಪರಿಚಯಿಸಿದ ಕೀರ್ತಿ ಬಸವಣ್ಣನವರಿಗೆ ಸೇರಿದ್ದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಎಚ್. ಪ್ರಸನ್ನ ಮಾತನಾಡಿ, ದೇಹವನ್ನು ದೇವಾಲಯಕ್ಕೆ ಹೋಲಿಸುತ್ತಾ ದೇಹವೇ ದೇಗುಲವಾಗಬೇಕು ಎಂದು ನುಡಿದ ಬಸವಣ್ಣ ಅಂತಾರಾಷ್ಟ್ರೀಯ ಮಟ್ಟದ ವಿಚಾರಧಾರೆಗಳನ್ನು ನೀಡಿದವರಾಗಿದ್ದಾರೆ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಜಿ.ಎಸ್., ಪುರಸಭಾ ಮುಖ್ಯಾಧಿಕಾರಿ ಎಂ.ಎಚ್. ಸುಧಾಕರ್ ಮಾತನಾಡಿದರು.
ತಾಲೂಕು ದೈಹಿಕ ಶಿಕ್ಷಣ ಸಂಯೋಜನಾಧಿಕಾರಿ ಜಿ.ಬಿ. ಬಾಗೇವಾಡಿ ಸ್ವಾಗತಿಸಿದರು. ಸಮಾಜ ಕಲ್ಯಾಣಾಧಿಕಾರಿ ದಯಾನಂದ ಪಿ. ವಂದಿಸಿದರು. ಕಾರ್ಮಿಕ ಇಲಾಖೆಯ ಚಿದಾನಂದ ಕಾಮತ್ ಕಾಸರಗೋಡು ಕಾರ್ಯಕ್ರಮ ನಿರೂಪಿಸಿದರು.

ಪಿಎಫ್ಐ ನಿಷೇಧಿಸಿ: ಎಬಿವಿಪಿ ಒತ್ತಾಯ
ಮಂಗಳೂರು: ಉಗ್ರಗಾಮಿಗಳ ಸಂಪರ್ಕ ಮತ್ತು ಮಾರಕಾಯುಧ ಹೊಂದಿರುವ ಪಿಎಫ್ಐ ಹಾಗೂ ಸಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಎಬಿವಿಪಿ ಆಗ್ರಹಿಸಿದೆ. ಕಣ್ಣೂರು ನಾರತ್ನಲ್ಲಿ ಕಚ್ಚಾ ಬಾಂಬ್, ಅಪಾರ ಮಾರಕಾಯುಧಗಳನ್ನು ಹೊಂದಿರುವ 21 ಕಾರ್ಯಕರ್ತರ ಬಂಧನವಾಗಿದ್ದು, ಇವರು ಉಗ್ರಗಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಕುರಿತು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಿದೆ. ಕಳೆದ ವರ್ಷ ಸಂಘಟನೆಯ ನಿಷೇಧಕ್ಕಾಗಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಯಾವುದೇ ಕ್ರಮ ಕೈಗೊಳ್ಳದಿರುವುದು ಸಂಶಯಕ್ಕೆ ಎಡೆಮಾಡಿದೆ ಎಂದು ಎಬಿವಿಪಿ ಜಿಲ್ಲಾ ನಗರ ಕಾರ್ಯದರ್ಶಿ ಯತೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.