ದಕ್ಷಿಣ ಕನ್ನಡ

ನಾಳ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

Published On :

ಬೆಳ್ತಂಗಡಿ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 2014ರ ಜನವರಿಯಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸದ ಪೂರ್ವಭಾವಿಯಾಗಿ ಪ್ರಾಯಶ್ಚಿತ ಹೋಮ, ಉಚ್ಚಾಟನೆ ಮುಂತಾದ ಧಾರ್ಮಿಕ, ವೈದಿಕ ವಿಧಿಗಳು ಇತ್ತೀಚೆಗೆ ನಡೆಯಿತು.
ಕ್ಷೇತ್ರದ ತಂತ್ರಗಳಾದ ನಡ್ವಂತ್ತಾಡಿ ಬಾಲಕೃಷ್ಣ ಪಾಂಗಾಣ್ಣಾಯ ಅವರ ನೇತೃತ್ವದಲ್ಲಿ ಪವಮಾನ ಹೋಮ, ಅಥರ್ವಶೀರ್ಷ ಗಣಯಾಗ, ಸರ್ಪ ಸಂಸ್ಕಾರ, ಆಶ್ಲೇಷ ಬಲಿ, ವಾಗ್ದೋಷ ಪರಿಹಾರ, ವೇದಪಾರಾಯಣ ಮೊದಲಾದ ಕಾರ್ಯಕ್ರಮಗಳು ನಡೆಯಿತು.
ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಅಂಗವಾಗಿ ನೂತನ ರಾಜಗೋಪುರದ ಸಂಕೋಚ ಕಾರ್ಯಕ್ರಮ ನಡೆಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಮಜಲು, ಸದಸ್ಯರಾದ ಲಿಂಗಪ್ಪ ಗೌಡ, ವೆಂಕಟರಮಣ ಪೈ, ಜನಾರ್ದನ ಪೂಜಾರಿ, ಅಂಬಾ ಆಳ್ವ, ವಿಜಯ ಎಚ್. ಪ್ರಸಾದ್, ಬಾಬು, ಸುರೇಂದ್ರ ಕುಮಾರ್, ಮುಖ್ಯ ಅರ್ಚಕ ರಾಘವೇಂದ್ರ ಆಸ್ರಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.