ದಕ್ಷಿಣ ಕನ್ನಡ

ಬ್ಯಾರಿ ಅಕಾಡೆಮಿ ಗೌರವ ಪ್ರಶಸ್ತಿ, ಪುರಸ್ಕಾರ ಪ್ರಕಟ

Published On :

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2012 ಮತ್ತು 2013ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುರಸ್ಕಾರ ಪ್ರಕಟಿಸಲಾಗಿದ್ದು, 6 ಮಂದಿಗೆ ಗೌರವ ಪ್ರಶಸ್ತಿ ಮತ್ತು ಐವರನ್ನು ಗೌರವ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮೇ 18ರಂದು ಸಂಜೆ 4ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾರಿ ಭಾಷೆ, ಕಲೆ, ಸಾಹಿತ್ಯ ಕ್ಷೇತ್ರದಲ್ಲಿ 2012ನೇ ಸಾಲಿನ ಗೌರವ ಪ್ರಶಸ್ತಿಗೆ ಇಸ್ಮಾಯಿಲ್ ಮುಸ್ಲಿಯಾರ್, ಡಾ. ಬಿ.ಕೆ. ಯೂಸುಫ್ ಮತ್ತು ಮಹಮ್ಮದ್ ಬ್ಯಾರಿ ಬಡ್ಡೂರು, 2013ನೇ ಸಾಲಿನ ಗೌರವ ಪ್ರಶಸ್ತಿಗೆ ರಝೂಕ್ ಹಾಜಿ ಹರೇಕಳ, ಮಹಮ್ಮದ್ ಚಿಕ್ಕಮಗಳೂರು, ಬಶೀರ್ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಎರಡು ವರ್ಷದ ಗೌರವ ಪುರಸ್ಕಾರಕ್ಕೆ ಅಬ್ದುಲ್ ಖಾದರ್ ಹಾಜಿ, ಡಾ. ಕಾಪು ಮಹಮ್ಮದ್, ಬಿ.ಎಂ. ಮುಮ್ತಾಜ್ ಅಲಿ, ಚಾರ್ಮಾಡಿ ಹಸನಬ್ಬ ಹಾಗೂ ಝಕಾರಿಯಾ ವೇಣೂರ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ 10 ಸಾವಿರ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಸಂಜೆ 3ಕ್ಕೆ ಸಾಂಸ್ಕೃತಿಕ ಜಾಥಾವನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕಾಸರಗೋಡು ಚಿನ್ನಾ ಉದ್ಘಾಟಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.