ಇಎಸ್‌ಐ ಅವ್ಯವಸ್ಥೆ: ಅಧಿಕಾರಿಗಳು ಸ್ಪಂದಿಸದಿದ್ದರೆ ನೀರು ತ್ಯಜಿಸುವೆ
ಮಂಗಳೂರು: ಇಎಸ್‌ಐ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಮೇ 20ರ ಒಳಗೆ ಸ್ಪಂದಿಸದೇ ಇದ್ದಲ್ಲಿ ನೀರು ಸೇವನೆಯನ್ನೂ ತ್ಯಜಿಸುವುದಾಗಿ ಅಖಿಲಭಾರತ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಸುದತ್ತ ಜೈನ್ ಎಚ್ಚರಿಕೆ ನೀಡಿದ್ದಾರೆ.
ಶಾಸಕ ಜೆ.ಆರ್. ಲೋಬೊ ಸೂಚನೆಯಂತೆ ಜಿಲ್ಲಾಧಿಕಾರಿ ಆದೇಶವನ್ನು ಇಎಸ್‌ಐ ಅಧಿಕಾರಿಗಳು ಕಡೆಗಣಿಸಿದ್ದಾರೆ. ಕಾರ್ಮಿಕರ ಬೇಡಿಕೆಗೆ ಸ್ಪಂದಿಸಲು ಅಧಿಕಾರಿಗಳು ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಇಎಸ್‌ಐ ಅಸ್ಪತ್ರೆ ಅವ್ಯವಸ್ಥೆ, ಬೀಡಿ ಕಾರ್ಮಿಕರ ಆಸ್ಪತ್ರೆ ನಿರ್ಮಾಣ, ಕಾರ್ಮಿಕ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ, ಮೂಡುಬಿದರೆ ಶಿರ್ತಾಡಿ ಗ್ರಾಮ ಪಂಚಾಯ್ತಿ ಅವ್ಯವಸ್ಥೆ ಪಡು ಕೊಣಾಜೆ ಡಾಂಬರೀಕರಣಕ್ಕೆ ಒತ್ತಾಯ, ಅಂಸಘಟಿತ ಕಾರ್ಮಿಕರಿಗೆ ಇಎಸ್‌ಐ ಮತ್ತು ಪಿಎಫ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ 7 ದಿನಗಳಿಂದ ಅಖಿಲಭಾರತ ಕಾರ್ಮಿಕ ಸಂಘ ಉಪವಾಸ ಸತ್ಯಾಗ್ರಹ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

