ದಕ್ಷಿಣ ಕನ್ನಡ

ಪ್ರತ್ಯೇಕ ಪ್ರಕರಣ: ಮೂವರು ಸಾವು

Published On :

ಮಂಗಳೂರು: ಮೂರು ಪ್ರತ್ಯೇಕ ಘಟನೆಗಳಲ್ಲಿ ಮೂರು ಮಂದಿ ಮೃತಪಟ್ಟ ಘಟನೆ ಭಾನುವಾರ ವರದಿಯಾಗಿದೆ.
ನಗರದ ದಕ್ಷಿಣ ಧಕ್ಕೆಯಲ್ಲಿ ಮಲಗಿದ ಸ್ಥಿತಿಯಲ್ಲೇ ಅಪರಿಚಿತ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಗೆ 35ರಿಂದ 40 ವರ್ಷ ಅಂದಾಜಿಸಲಾಗಿದ್ದು, ಕಾಯಿಲೆಯಿಂದ ಅಥವಾ ವಿಪರೀತ ಅಮಲು ಪದಾರ್ಥ ಸೇವಿಸಿ ಮೃತಪಟ್ಟಿರಬೇಕು ಎಂದು ಸ್ಥಳೀಯ ಕಾಶಿನಾಥ್ ಎಂಬವರು ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
ನಗರದ ವೆನ್ಲಾಕ್ ಆಸ್ಪತ್ರೆಯಿಂದ ಕಾಣೆಯಾದ ರೋಗಿ ಆಸ್ಪತ್ರೆ ಆವರಣದಲ್ಲಿ ಸಾವಿಗೀಡಾದ ಘಟನೆ ಸಂಭವಿಸಿದೆ. ಮಲೇರಿಯಾ ಜ್ವರದಿಂದ ಬಳಲುತ್ತಿದ್ದ ಧರ್ಮ(38)ಎಂಬಾತ ಮೇ 17ರಂದು ಆಸ್ಪತ್ರೆಗೆ ದಾಖಲಾಗಿದ್ದರು.  ಮರುದಿನ ಬೆಳಗ್ಗೆ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಈತನ ಶವ ಆಸ್ಪತ್ರೆ ಆವರಣದಲ್ಲಿ ಪತ್ತೆಯಾಗಿದ್ದು, ಮಲೇರಿಯಾ ಜ್ವರ ಉಲ್ಭಣಿಸಿ ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ಹರೀಶ್ ಎಂಬವರು ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದರು.
ಪತ್ನಿ ಜತೆಗಿನ ವಿರಸದಿಂದ ಬೇಸತ್ತು ಪತಿ ಸಂತೋಷ್ ಕುಮಾರ್(36)ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ತನ್ನ ಕುಂಬ್ಳೆಯ ಮಾವನ ಮನೆಯಲ್ಲಿ ಮೇ 16ರಂದು ಪತ್ನಿ ಸುಕನ್ಯ ಜತೆ ಗಲಾಟೆ ಮಾಡಿ ಚಿಕ್ಕಮ್ಮನ ಮನೆ ಜೆಪ್ಪು ಬಪ್ಪಾಲ್ಗೆ ಸಂತೋಷ್ ಬಂದಿದ್ದನು. ಮೇ 18ರಂದು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿದ್ದನು ಎಂದು ಪುಷ್ಪ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.