ಸೊರಕೆ, ಖಾದರ್ ಧರ್ಮಸ್ಥಳ ಭೇಟಿ
ಬೆಳ್ತಂಗಡಿ: ರಾಜ್ಯದ ಇಬ್ಬರು ಮಂತ್ರಿಗಳು ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದರು.
ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮುಗಿಸಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಸಮಾಲೋಚಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ನಗರಾಭಿವೃದ್ಧಿ ಸಚಿವರೊಂದಿಗೆ ನೇರ ಸಂಪರ್ಕವಿಟ್ಟುಕೊಂಡಿದ್ದೇನೆ. ನಗರಾಭಿವೃದ್ಧಿಯ ಬಗ್ಗೆ ಬುಧವಾರ ಬೆಂಗಳೂರಿನಲ್ಲಿ ಸಭೆ ಕರೆದಿದ್ದೇನೆ. ದಿನಪೂರ್ತಿ ನಡೆಯುವ ಸಭೆಯಲ್ಲಿ ರೂಪುರೇಷೆಗಳು ತಯಾರಾಗಲಿವೆ. ತಿಂಗಳಿಗೊಮ್ಮೆ ಪರಿಶೀಲನಾ ಸಭೆ ನಡೆಯಲಿದೆ. ಮುಖ್ಯಮಂತ್ರಿಗಳ ಆಶಯದಂತೆ ಪಾರದರ್ಶಕ, ಭ್ರಷ್ಟಾಚಾರ ರಹಿತ, ಚುರುಕು ಆಡಳಿತ ನಡೆಸಲು ನಾವೆಲ್ಲ ಸಹಕರಿಸಲಿದ್ದೇವೆ ಎಂದರು.
ಗ್ರಾಮಾಭಿವೃದ್ಧಿ ಯೋಜನೆಯು ಚಿಕ್ಕಮಗಳೂರಿನಲ್ಲಿ ನಿರ್ವಹಿಸುತ್ತಿರುವ ಘನತ್ಯಾಜ್ಯ ಸಂಸ್ಕರಣದ ಬಗ್ಗೆ ಡಾ. ಹೆಗ್ಗಡೆಯವರಿಂದ ಮಾಹಿತಿ ಪಡಕೊಂಡ ಸೊರಕೆ ಈ ಬಗ್ಗೆ ನಾಳೆ ನಡೆಯುವ ಸಭೆಯಲ್ಲಿ ಅಗತ್ಯವಾಗಿ ಚರ್ಚಿಸಲಿದ್ದೇನೆ ಎಂದರು. ಕರಾವಳಿ ಪ್ರದೇಶದ ನೆಲ, ಜಲದ ಅಭಿವೃದ್ಧಿಗಾಗಿ ಕರಾವಳಿ ಪ್ರದೇಶ ಸಮಿತಿಯನ್ನು ಚುರುಕುಗೊಳಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

