ಪ್ರವಾಹ ವಿಕೋಪ ಎದುರಿಸಲು ಸೂಚನೆ
ಮಂಗಳೂರು: ಜಿಲ್ಲೆಯಲ್ಲಿ ವ್ಯಾಪ್ತಿಯಲ್ಲಿ ಚರಂಡಿ ಹಾಗೂ ಕಾಲುವೆಗಳನ್ನು ಶುಚಿಗೊಳಿಸಿ, ಕೃತಕ ನೆರೆ ಉಂಟಾಗದಂತೆ ಸರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಎನ್. ಪ್ರಕಾಶ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಅತಿವೃಷ್ಟಿ, ನೆರೆ ಸಂಭವಿಸುವ ಸಾಧ್ಯತೆಯಿರುವ ಪ್ರದೇಶಗಳನ್ನು ಗುರುತಿಸಿ ತಾಲೂಕು ನಕ್ಷೆಯಲ್ಲಿ ದಾಖಲಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರರು ಹೆಚ್ಚಿನ ಗಮನ ವಹಿಸಿ ಪರಿಹರಿಸಬೇಕು. ಸರ್ಕಾರದ ಹಣವನ್ನು ಪೋಲು ಮಾಡದೆ ವಿವೇಚನೆಯಿಂದ ಅರ್ಹ ಪ್ರದೇಶಗಳಿಗೆ ಹಾಗೂ ಜನರಿಗೆ ತಲುಪುವಂತೆ ಯೋಜನೆ ರೂಪಿಸಿ ಎಂದು ಸೂಚಿಸಿದರು. ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಜಿಲ್ಲಾ ಪಂಚಾಯ್ತಿ, ಸಹಾಯಕ ಆಯುಕ್ತ, ತಹಸೀಲ್ದಾರ್, ಪುರಸಭೆ ಹಾಗೂ ನಗರ ಪಂಚಾಯ್ತಿ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳುವಂತೆ ಹೇಳಿದರು.
ಪಾಲಿಕೆ, ಪೊಲೀಸ್ ಇಲಾಖೆ ಹಾಗೂ ತಾಲೂಕು ಕಚೇರಿಗಳಲ್ಲಿ 24 ಗಂಟೆ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆಯಬೇಕು. ಯಾವುದೇ ಸಮಸ್ಯೆಗಳಿಗೆ 1077 ಮತ್ತು ಮೆಸ್ಕಾಂ ಸಂಬಂಧ ಸಮಸ್ಯೆಗಳಿಗೆ 18004251917 ಸಂಪರ್ಕಿಸಬಹುದು. ನದಿ ನೀರಿನ ಮಟ್ಟ, ಮಳೆಯ ವಿವರಗಳನ್ನು ಪ್ರತಿದಿನ ಬೆಳಗ್ಗೆ 9 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿಸುವಂತೆ ಸೂಚನೆ ನೀಡಿದರು.
ಸಂತ್ರಸ್ತರಿಗೆ ತುರ್ತು ನೆರವು ನೀಡಲು ಪೊಲೀಸ್, ಹೋಂಗಾರ್ಡ್ಸ್, ಅಗ್ನಿಶಾಮಕ ದಳಗಳನ್ನು ಒಳಗೊಂಡ ತುರ್ತು ಸಹಾಯಕ ಪಡೆ ರಚಿಸುವಂತೆ ಈಜುಗಾರ ತಂಡವನ್ನು ಗುರುತಿಸಿ ಸಜ್ಜಾಗಿರಿಸುವ, ದೋಣಿ ಮತ್ತು ಅಗತ್ಯ ವಾಹನ ಪರಿಕರಗಳನ್ನು ಸುಸ್ಥಿತಿಯಲ್ಲಿಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪನರ್ವಸತಿ, ಗಂಜಿ ಕೇಂದ್ರದ ವ್ಯವಸ್ಥೆಗೆ, ಪರಿಹಾರ ನೀಡಿಕೆಗೆ ಗರಿಷ್ಠ 24 ಗಂಟೆಯೊಳಗೆ ನೀಡಿ ಪರಿಹಾರ ಧನ ವಿತರಿಸುವಂತೆ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಿದರು. ಸಮುದ್ರ ಕೊರೆತ ತಡೆಗೆ ಮುಂದಿನ ಎಂಟು ದಿನಗಳೊಳಗಾಗಿ ಸೂಕ್ತ ಕ್ರಮ ಹಾಗೂ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದ ಜಿಲ್ಲಾಧಿಕಾರಿಗಳು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಸಚಿವರಿಗೆ ಅಧಿಕಾರಿಗಳೇ ಉತ್ತರಿಸಬೇಕಾಗಿದೀತು ಎಂದು ಎಚ್ಚರಿಕೆ ನೀಡಿದರು.
ಮಳೆಗಾಲದಲ್ಲಿ ಸ್ಥಳೀಯ ಪರಿಸ್ಥಿತಿ ಗಮನದಲ್ಲಿರಿಸಿ ಶಾಲೆಗೆ ರಜೆ ನೀಡುವ ಅಧಿಕಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಿದರು. ಚಾರ್ಮಾಡಿಯಲ್ಲಿ ಪ್ರತಿ ವರ್ಷ ಸಂಭವಿಸುವ ರಸ್ತೆ ತಡೆ ಸಮಸ್ಯೆ ಪರಿಹರಿಸಲು ರಾಷ್ಟ್ರೀಯ ಹೆದ್ದಾರಿಯವರು ಸಹಕಾರ ನೀಡುವಂತೆ ನಿರ್ದೇಶನ ನೀಡಿದರು. ಅಪರ ಜಿಲ್ಲಾಧಿಕಾರಿ ದಯಾನಂದ್ ಕೆ.ಎ, ಆಯುಕ್ತ ಡಾ. ಹರೀಶ್ ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

