ದಕ್ಷಿಣ ಕನ್ನಡ

ಕೃಷ್ಣ ಮಠ, ಗೋಕರ್ಣ ದೇಗುಲ ಸರ್ಕಾರ ವಶಪಡಿಸಿದರೆ ಹೋರಾಟ: ಸಂಸದ ನಳಿನ್

Published On :

ಮಂಗಳೂರು: ಉಡುಪಿ ಕೃಷ್ಣ ಮಠ ಮತ್ತು ಗೋಕರ್ಣ ದೇಗುಲವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಜನರ ಧಾರ್ಮಿಕ ಭಾವನೆ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಮಠಗಳಿಗೆ ಅದರದ್ದೇ ಆದ ಪರಂಪರೆ ಇದೆ. ಸಾಂಪ್ರದಾಯಿಕ ಪೂಜಾ ಕ್ರಮಗಳನ್ನು ಅನುಸರಿಸುತ್ತಾ ಬರಲಾಗುತ್ತಿದೆ. ಇದನ್ನು ಸರ್ಕಾರೀಕರಣ ಮಾಡುವ ಮೂಲಕ ಗೊಂದಲ ಸೃಷ್ಟಿ ಮಾಡುವುದು ಸರಿ ಅಲ್ಲ. ಯಾರದೇ ಧಾರ್ಮಿಕ ಭಾವನೆಗೆ ಮಠದ ಪರಂಪರಗೆ ಧಕ್ಕೆ ತರುವ ಕೆಲಸಕ್ಕೆ ಸರ್ಕಾರ ಕೈ ಹಾಕಬಾರದು. ಈ ರೀತಿ ಮಾಡಿದರೆ ಇದರ ವಿರುದ್ಧ ಜನ ಜಾಗೃತಿ ಕೆಲಸಕ್ಕೆ ಬಿಜೆಪಿ ಮುಂದಾಗಲಿದೆ ಎಂದು ನಳಿನ್ ಎಚ್ಚರಿಸಿದ್ದಾರೆ. ಬಿಜೆಪಿ ಆಡಳಿತದಲ್ಲಿ ಹೊಸ ತಾಲುಕು ರಚಿಸಲು ಮುಂದಾಗುವ ಮೂಲಕ ಆ ಭಾಗದ ಜನರ ಕನಸು ನನಸು ಮಾಡಿದೆ. ಆದರೆ ಕಾಂಗ್ರೆಸ್ ಸರ್ಕಾರ ಏಕಾಏಕಿ ಪ್ರಸ್ತಾಪ ರದ್ದುಗೊಳಿಸಿರುವುದು ಜನವಿರೋಧಿ ಕ್ರಮ, ಇದರ ವಿರುದ್ಧವೂ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಕಟೀಲ್ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.