ದಕ್ಷಿಣ ಕನ್ನಡ

ಶಿಕ್ಷಣ, ಪ್ರವಾಸ, ಐಟಿ ಕ್ಷೇತ್ರಕ್ಕೆ ಸಮಗ್ರ ಯೋಜನೆ: ಲೋಬೋ

Published On :

ಮಂಗಳೂರು: ಜಿಲ್ಲೆಯ ಶಿಕ್ಷಣ, ಪ್ರವಾಸೋದ್ಯಮ ಮತ್ತು ಐಟಿ ಕ್ಷೇತ್ರದಲ್ಲಿ ಸಮಗ್ರ ಯೋಜನೆ ರೂಪುಗೊಳ್ಳಬೇಕು ಎಂದು ಶಾಸಕ ಜೆ.ಆರ್.ಲೋಬೋ ಹೇಳಿದ್ದಾರೆ. ನಗರದಲ್ಲಿ ಶನಿವಾರ ನಡೆದ ಮಂಗಳೂರು ಕ್ರೆಡೈಗೆ 2 ವರ್ಷ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪುಷ್ಪರಾಜ ಜೈನ್ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ರೀತಿ ಸಮಗ್ರ ಯೋಜನೆ ರೂಪಿಸಬೇಕಾದರೆ ಶಾಸಕರು ಮತ್ತು ಸಂಸದರು ಕೈಜೋಡಿಸಬೇಕು. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನಗರ ಯೋಜನೆ ಸಮಸ್ಯೆ, ನಗರಾಭಿವೃದ್ಧಿ ಪ್ರಾಧಿಕಾರದ ತೊಂದರೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳಬೇಕಾಗಿದೆ ಎಂದರು. ನಿರ್ಗಮನ ಅಧ್ಯಕ್ಷ ಪಿ.ಎಂ.ರಜಾಕ್ ಅವರು ಅಧ್ಯಕ್ಷ ಪುಷ್ಪರಾಜ್ ಜೈನ್‌ಗೆ ಅಧಿಕಾರ ಹಸ್ತಾಂತರಿಸಿದರು. ಗೌರವ ಕಾರ್ಯದರ್ಶಿಯಾಗಿ ಗಣೇಶ್ ಬಂಗೇರ, ಜತೆ ಕಾರ್ಯದರ್ಶಿ ಶ್ರೀನಾಥ್, ಕೋಶಾಧಿಕಾರಿ ವಿನೋದ್ ಪಿಂಟೋ ಅಧಿಕಾರ ಸ್ವೀಕರಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಹಾಜರಿದ್ದರು. ಬಳಿಕ ಸಾಹಿಲ್ ಬಳಗದಿಂದ ಗಝಲ್ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.