ಹಿರಿಯ ಕಾಂಗ್ರೆಸಿಗ ಮುಂಡೋಡಿ ಬೆಳ್ಯಪ್ಪ ಗೌಡ ನಿಧನ
ಸುಳ್ಯ: ತಾಲೂಕಿನ ಹಿರಿಯ ಸಾಮಾಜಿಕ ಧುರೀಣ ಮುಂಡೋಡಿ ಬೆಳ್ಯಪ್ಪ ಗೌಡ (99) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಹಿರಿಯ ಕಾಂಗ್ರೆಸಿಗರಾಗಿದ್ದ ಅವರು ಸುಳ್ಯ ತಾಲೂಕು ಬೋರ್ಡ್ ಅಧ್ಯಕ್ಷರಾಗಿದ್ದರು. ಟಿಎಪಿಸಿಎಂಎಸ್, ಭೂ ಬ್ಯಾಂಕ್, ರಬ್ಬರ್ ಸೊಸೈಟಿ ಸೇರಿದಂತೆ ಸಹಕಾರಿ ಸಂಸ್ಥೆಗಳ ಸ್ಥಾಪನೆಗೆ ಕಾರಣಕರ್ತರಾಗಿದ್ದರಲ್ಲದೆ, ಜಿಲ್ಲಾ ಎಸ್ಕೆಎಸಿಎಂಎಸ್ ನಿರ್ದೇಶಕರಾಗಿ, ಸ್ಥಳೀಯ ಸಹಕಾರಿ ಸಂಘಗಳ ಅಧ್ಯಕ್ಷರಾಗಿ ಸಹಕಾರ ರಂಗದಲ್ಲಿ ಮುಂಚೂಣಿಯಲ್ಲಿದ್ದರು. ಅವರು ಪತ್ನಿ, ಪುತ್ರರಾದ ಡಾ.ಎಂ.ಬಿ. ಜಯರಾಮ್, ಕಾಂಗ್ರೆಸ್ ನಾಯಕರಾದ ನಿತ್ಯಾನಂದ ಮುಂಡೋಡಿ, ಭರತ್ ಮುಂಡೋಡಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಬುಧವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.
ಹೆಗಲು ಕೊಟ್ಟ ಪೂಜಾರಿ: ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಸೇರಿದಂತೆ ವಿವಿಧ ಕ್ಷೇತ್ರಗಳ ನೂರಾರು ಗಣ್ಯರು ಮೃತದೇಹದ ಅಂತಿಮ ದರ್ಶನ ಪಡೆದರು. ಮೃತದೇಹ ಅಂತ್ಯಕ್ರಿಯೆಗಾಗಿ ಕೊಂಡೊಯ್ಯುವ ವೇಳೆ ಪೂಜಾರಿ ಹೆಗಲು ಕೊಟ್ಟರು. ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ರಾಜ್ಯ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

