ಸುದ್ದಿ ಸಂಕ್ಷೇಪ
ಸಿಬಿಐ ತನಿಖೆಗೆ ವೈಯಕ್ತಿಕ ವಿರೋಧವಿಲ್ಲ: ರಮಾನಾಥ ರೈ
ಮಂಗಳೂರು: ಸೌಜನ್ಯ ಕೊಲೆ ಪ್ರಕರಣದಲ್ಲಿ ಸರ್ಕಾರ ಕೈಗೊಳ್ಳುವ ತನಿಖೆಗೆ ತನ್ನ ಸಂಪೂರ್ಣ ಬೆಂಬಲವಿದೆ. ಸಿಬಿಐ ತನಿಖೆಗೆ ವೈಯಕ್ತಿಕವಾಗಿ ತನ್ನ ವಿರೋಧವಿಲ್ಲ ಎಂದು ಅರಣ್ಯ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರವಿದ್ದ ಸಂದರ್ಭ ಸೌಜನ್ಯ ಕೊಲೆ ಪ್ರಕರಣ ಸಂಭವಿಸಿದೆ. ಆದರೆ ಹಲವು ಸಂಘಟನೆಗಳು ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಹೊಣೆಗಾರಿಕೆ ಮಾಡುತ್ತಿದೆ ಎಂದು ಟೀಕಿಸಿದರು. ಸಿಬಿಐ ತನಿಖೆಯ ಬಗ್ಗೆ ಮುಖ್ಯಮಂತ್ರಿಯಲ್ಲಿ ವಿಚಾರಿಸಿ ಚರ್ಚಿಸಲಾಗುವುದು. ಮುಖ್ಯಮಂತ್ರಿ ನಿಲುವಿಗೆ ನಾವೆಲ್ಲರೂ ಬದ್ಧ ಎಂದರು.
ಹಿಂದಿ ಶಿಕ್ಷಕ್ ಫಲಿತಾಂಶ
ಮಂಗಳೂರು: ಕರ್ನಾಟಕ ಫ್ರೌಡಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಸೆಪ್ಟೆಂಬರ್ನಲ್ಲಿ ಮಂಡ್ಯದಲ್ಲಿ ನಡೆದ ಹಿಂದಿ ಶಿಕ್ಷಕ್ ಕೋರ್ಸ್ ಪ್ರಶಿಕ್ಷಣಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದೆ. ಫಲಿತಾಂಶ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಪಡೆಯಲು ಮಂಡ್ಯದ ಹಿಂದಿ ಶಿಕ್ಷಕ್ ಟ್ರೈನಿಂಗ್ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ 08232-226667 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

