ದಕ್ಷಿಣ ಕನ್ನಡ

ಪ್ರತಿ ತಾಲೂಕಲ್ಲಿ ಜೆನೆರಿಕ್ ಔಷಧ ಕೇಂದ್ರ: ಖಾದರ್

Published On :

ಮಂಗಳೂರು: ರಾಜ್ಯ ಸರ್ಕಾರ ಆರೋಗ್ಯಕ್ಕೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ರೂಪಿಸುತ್ತಿದ್ದು, ಜನರಿಗೆ ಕಡಿಮೆ ದರದಲ್ಲಿ ಔಷಧ ದೊರಕುವಂತಾಗಲು ಪ್ರತಿ ತಾಲೂಕಿನಲ್ಲಿಯೂ ಜೆನೆರಿಕ್ ಔಷಧ ಕೇಂದ್ರ ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು. ಭಾನುವಾರ ಕಲ್ಲಾಪು ಉರ್ದು ಶಾಲೆಯಲ್ಲಿ ಏರ್ಪಡಿಸಿದ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರ, ಕೆಲವು ಮಾತ್ರೆಗಳಿಗೆ ದುಪ್ಪಟ್ಟು ದರವಿರುವ ಕಾರಣ ಅಂಥ ಮಾತ್ರೆಗಳನ್ನು ಜನರಿಗೆ ಶೇ.90 ರಿಯಾಯ್ತಿ ದರದಲ್ಲಿ ನೀಡಲು ಈ ಔಷಧ ಕೇಂದ್ರಗಳು ಸಹಕಾರಿಯಾಗಲಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಯೋಜನೆ  ಪ್ರಾರಂಭಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.