ಇಬ್ಬರ ಮೇಲೆ ಹಲ್ಲೆ: ಬಂಟ್ವಾಳ ಉದ್ರಿಕ್ತ
ಬಂಟ್ವಾಳ: ತಂಡವೊಂದು ಇಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳವಾರ ತಡರಾತ್ರಿ ಬಂಟ್ವಾಳದ ಕೆಳಗಿನ ಪೇಟೆಯಲ್ಲಿ ನಡೆದಿದ್ದು, ಬಂಟ್ವಾಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣಗೊಂಡಿದೆ.
ಇಲ್ಲಿನ ಗ್ರಾಮಾಂತರ ಠಾಣೆಯ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡವರನ್ನು ಜಕ್ರಿಬೆಟ್ಟು ನಿವಾಸಿಗಳಾದ ಕಿರಣ್ ಡಿ' ಸೋಜ ಹಾಗೂ ಲೋಕೇಶ್ ಎಂದು ಗುರುತಿಸಲಾಗಿದೆ.
ಮಂಗಳವಾರ ಸಂಜೆ ಸರಪಾಡಿ ಸಮೀಪದ ಪರ್ಲ ಎಂಬಲ್ಲಿ ನಡೆದಿದ್ದ ದನ ಸಾಗಾಟ ವಿಚಾರದಲ್ಲಿ ಈ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಹಲ್ಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.
ಕಿರಣ್ ಹಾಗೂ ಲೋಕೇಶ್ ಎಂಬವರು ಬಿ.ಸಿ. ರೋಡಿನಿಂದ ಬಂಟ್ವಾಳದತ್ತ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆಯೇ ಬಂಟ್ವಾಳದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ಜನ ಜಮಾಯಿಸಿದ್ದು, ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕ ಕಬ್ಬಾಳ್‌ರಾಜ್ ಸ್ಥಳದಲ್ಲಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

