ಸಹಕಾರಿ ಬ್ಯಾಂಕ್ ಅಧ್ಯಯನಕ್ಕೆ ಲಂಡನ್ ಪ್ರೊಫೆಸರ್ ಆಗಮನ
ಮಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಬ್ಯಾಂಕ್ಗಳು ವಿಶೇಷ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ವಿಶೇಷ ಅಧ್ಯಯನಕ್ಕೆ ಲಂಡನ್ನ ಪ್ರೊಫೆಸರ್ ಓರ್ವರು ಮಂಗಳೂರು ಎಸ್ಸಿಡಿಸಿಸಿ ಬ್ಯಾಂಕ್ಗೆ ಆಗಮಿಸಿದ್ದಾರೆ.
ಲಂಡನ್ ಕಿಂಗ್ಸ್ ಕಾಲೇಜ್ ಪ್ರೊ. ಜೋನ್ ವಿಲ್ಸನ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಜತೆ ಸಂವಾದ ನಡೆಸಿದರು. ವಾಣಿಜ್ಯ ಹಾಗೂ ಖಾಸಗಿ ಬ್ಯಾಂಕ್ಗಳ ಪೈಪೋಟಿ ನಡುವೆಯೂ ಸಾಧನೆ ಮಾಡಿದ ಸಹಕಾರಿ ಬ್ಯಾಂಕ್ ಕಾರ್ಯ ವೈಖರಿ ಬಗ್ಗೆ ಅಧ್ಯಕ್ಷರಿಂದ ಮಾಹಿತಿ ಪಡೆದುಕೊಂಡರು.
ಗ್ರಾಮೀಣ ಪ್ರದೇಶದಲ್ಲಿರುವ ಪ್ರಾಥಮಿಕ ಕೃಷಿ ಪತ್ತನ ಸಹಕಾರಿ ಸಂಘಗಳು ಸಹಕಾರಿ ಕ್ಷೇತ್ರದ ಬೆನ್ನೆಲುಬಾಗಿದ್ದು, ಆ ಭಾಗದ ಜನರ ಆರ್ಥಿಕ ಶಕ್ತಿಯಾಗಿದೆ. ಎಸ್ಸಿಡಿಸಿಸಿ ಬ್ಯಾಂಕ್ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಿದೆ. ಕೃಷಿಕರ ಅವಶ್ಯಕತೆಗಳಿಗೆ ಕ್ಲುಪ್ತ ಸಮಯದಲ್ಲಿ ಸ್ಪಂದಿಸುತ್ತಿರುವ ಸಹಕಾರಿ ಬ್ಯಾಂಕ್ ಗ್ರಾಮೀಣ ಪ್ರದೇಶದಲ್ಲಿ ಶಾಖೆ ತೆರೆದು ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡುತ್ತಿದೆ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ವಿವರಿಸಿದರು.
ಸ್ವಸಹಾಯ ಗುಂಪುಗಳ ರಚನೆ ಹಾಗೂ ಸಮರ್ಪಕ ಅನುಷ್ಠಾನದಲ್ಲಿಯೂ ಮುಂಚೂಣಿಯಲ್ಲಿರುವುದರಿಂದ ಸಹಕಾರಿ ಕ್ಷೇತ್ರ ಬಲಾಢ್ಯವಾಗಿದೆ ಎಂದು ವಿವರಿಸಿದರು. ನವೋದಯ ಗುಂಪುಗಳ ಸದಸ್ಯರಿಗೆ ಸ್ವ ಉದ್ಯೋಗ ತರಬೇತಿ ಮತ್ತು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲಾಗುತ್ತಿದೆ ಎಂದು ವಿವರಿಸಿದರು.
ಈ ಸಂದರ್ಭ ಪತ್ರಕರ್ತ ಡಾ.ರೊನಾಲ್ಡ್ ಅನಿಲ್ ಫರ್ನಾಂಡಿಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

