ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ
ಮಂಗಳೂರು: 2013-14ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು 13 ರಿಂದ 16ರವರೆಗೆ ಎರಡನೇ ಹಂತವಾಗಿ ನಡೆಸಲಾಗುವುದು ಎಂದು ಜಿ.ಪಂ. ಕಾರ್ಯನಿರ್ವಾಹಕ ಅಧಿಕಾರಿ ತುಳಸಿ ಮದ್ದಿನೇನಿ ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಸರ್ವ ಶಿಕ್ಷಣ ಅಭಿಯಾನ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ರಾಜ್ಯದ ಎಲ್ಲ ನಗರ ಕ್ಲಸ್ಟರ್ಗಳನ್ನು ಗುರುತಿಸಿ, 2011-14ರ ಸಾಲಿನ ಮಕ್ಕಳ ಚಲನ ಮಾಹಿತಿ ಪರಿಶೀಲನೆ ಮತ್ತು ಜನವಸತಿ ಪ್ರದೇಶದಲ್ಲಿನ ಎಲ್ಲಾ ಕುಟುಂಬ ಸಮೀಕ್ಷೆ ನಡೆಸಲಾಗುವುದು. ಕುಟುಂಬ ಸಮೀಕ್ಷೆಗೆ ಸಂಬಂಧಿಸಿದಂತೆ ಪ್ರತಿ 300 ಕುಟುಂಬಗಳಿಗೆ ಒಂದು ತಂಡದಂತೆ ಅಗತ್ಯವಿರುವ ಸಂಖ್ಯೆಯಷ್ಟು ತಂಡಗಳನ್ನು ರಚಿಸಲಾಗುವುದು. 10 ಸಮೀಕ್ಷೆ ತಂಡಗಳಿಗೆ ಒಬ್ಬರು ಪ್ರೌಢಶಾಲಾ ಸಹ ಶಿಕ್ಷಕರನ್ನು ತಂಡದ ಮೇಲ್ವಿಚಾರಕರಾಗಿ ಮತ್ತು ಪ್ರತಿ 10 ಮೇಲ್ವಿಚಾರಕರಿಗೆ ಒಬ್ಬರು ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಕ್ಲಸ್ಟರ್ ಹಂತದ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ ಎಂದು ಸರ್ವ ಶಿಕ್ಷಣ ಅಭಿಯಾನ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಶಿವಪ್ರಕಾಶ್ ತಿಳಿಸಿದರು. ಈ ಸಮೀಕ್ಷಾ ಕಾರ್ಯಕ್ಕೆ ಬ್ಲಾಕ್, ಜಿಲ್ಲಾ ಹಂತದ ಅಧಿಕಾರಿಗಳಿಗೆ ಮತ್ತು ಸಂಪನ್ಮೂಲ ವ್ಯಕ್ತಿಗಳಿಗೆ ಕಾರ್ಯಾಗಾರ ನಡೆಸಲಾಗುವುದು. ಜಿಲ್ಲಾಧಿಕಾರಿ ಎನ್.ಪ್ರಕಾಶ್, ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಮೋಸೆಸ್ ಜಯಶೇಖರ್, ಸಮಿತಿ ಸದಸ್ಯರು ಇದ್ದರು.
ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯ ವೇತನ: ಅರ್ಹರಿಂದ ಅರ್ಜಿ ಆಹ್ವಾನ
ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ದ.ಕ. ಜಿಲ್ಲೆಯ ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನಮಂತ್ರಿಗಳ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನ. 20 ಕೊನೆ ದಿನ. ಅರ್ಜಿಯನ್ನು ಢಿಢಿಢಿ.ಜಜಡಢಿ.್ಜ್ಟಢ.್ಝಟಿ ವೆಬ್ಸೈಟ್ನಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗೆ 0824- 2450933 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

