ವ್ಯಕ್ತಿ ಮೇಲೆ ಹಲ್ಲೆ: ದೂರು
ಮೂಲ್ಕಿ: ವ್ಯಕ್ತಿಯೊಬ್ಬರ ಮೇಲೆ ತೀವ್ರ ಹಲ್ಲೆ ನಡೆಸಿದ ಘಟನೆ ಕೆ.ಎಸ್. ರಾವ್ ನಗರದ ಬಿಜಾಪುರ ಕಾಲೋನಿಯ ಭಾಗ್ಯವಂತಿ ದೇವಸ್ಥಾನ ಬಳಿ ಸೋಮವಾರ ಸಂಜೆ ನಡೆದಿದೆ.
ಸ್ಥಳೀಯ ರಿಕ್ಷಾ ಚಾಲಕ ಸಂಗನ ಬಸವ ಎಂಬವರಿಗೆ ಶರಣ ಬಸಪ್ಪ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.
ತೀವ್ರ ಗಾಯಗೊಂಡ ಸಂಗನ ಬಸವ ಮೂಲ್ಕಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಮತ್ತೊಂದು ಪ್ರಕರಣದಲ್ಲಿ ಶರಣ ಬಸಪ್ಪನಿಗೆ ಸ್ಥಳೀಯರಾದ ಶರಣಪ್ಪ, ಸಂತೋಷ್, ಚೆನ್ನಿಗಪ್ಪ ಮತ್ತು ಬಸವರಾಜ್ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಪ್ರಕರಣ ದಾಖಲಾಗಿದೆ.
ಅಪಘಾತದಲ್ಲಿ ಗಾಯಾಳು ದೈಹಿಕ ಶಿಕ್ಷಕ ಸಾವು
ಉಪ್ಪಿನಂಗಡಿ: ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಚನ ಶಾಲೆ ದೈಹಿಕ ಶಿಕ್ಷಕ ವೆಂಕಟರಮಣ ಕಾರಂತ (50) ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ.
ಅ.7ರಂದು ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿ ಅವರು ಬೈಕ್ನಲ್ಲಿ ಸಂಚರಿಸುತ್ತಿದ್ದಾಗ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ.
ಮೃತರು ಕಾಂಚನ ವೆಂಕಟ ಸುಬ್ರಹ್ಮಣ್ಯ ಸ್ಮಾರಕ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ವಾಸ್ತವ್ಯ ಹೊಂದಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಪುತ್ತೂರು ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

