ದಕ್ಷಿಣ ಕನ್ನಡ

ಮಹಿಳೆ ಕೊಲೆ ಮಾಡಿ ಚಿನ್ನಾಭರಣ ಅಪಹರಣ

Published On :

ಮಂಗಳೂರು: ಶಕ್ತಿನಗರ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಮೇಲೆರೆಗಿದ ದರೋಡೆಕೋರರು ಕಿವಿಯನ್ನು ಕತ್ತರಿಸಿ ಓಲೆ ಸಹಿತ ಚಿನ್ನಾಭರಣಗಳನ್ನು ದೋಚಿದ್ದಲ್ಲದೆ ತಲೆಗೆ ಮಾರಣಾಂತಿಕವಾಗಿ ಹೊಡೆದು ಪೊದೆಯಲ್ಲಿ ಎಸೆದು ಹೋಗಿರುವ ಘಟನೆ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಸಂಭವಿಸಿದೆ. ಪೊದೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ನಗರದ ಸಿಟಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದ ಅವರು ಮೃತಪಟ್ಟಿದ್ದಾರೆ. ಭವಾನಿ ಮೃತಪಟ್ಟವರು. ಭವಾನಿ ಅವರು ಎಷ್ಟು ಹೊತ್ತಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಮನೆಯವರು ಹುಡುಕಾಟ ನಡೆಸಿದಾಗ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ನಗರದಲ್ಲಿ ಸರಗಳ್ಳತನ ಹೆಚ್ಚುತ್ತಿರುವುದಲ್ಲದೆ ಇದೀಗ ಮಾರಣಾಂತಿಕವಾಗಿ ಹಲ್ಲೆಗೈದು ನಡೆಸಿ ಚಿನ್ನಾಭರಣ ದೋಚಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.