ದಕ್ಷಿಣ ಕನ್ನಡ

ನಾಳೆಯಿಂದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯ

Published On :

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಫ್ರೌಢಶಾಲೆ ಬೆಳಾಲು ಇದರ ಬೆಳ್ಳಿಹಬ್ಬದ ಅಂಗವಾಗಿ ದ.ಕ. ಜಿ ಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಇದರ ವತಿಯಿಂದ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಫ್ರೌಢಶಾಲೆ ಮೈದಾನದಲ್ಲಿ ನ.15, 16ರಂದು ರಾಜ್ಯ ಮಟ್ಟದ ಪ್ರೌಢಶಾಲೆ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾವಳಿ ನಡೆಯಲಿದೆ ಎಂದು ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದಶರ್ ಡಾ. ಬಿ. ಯಶೋವರ್ಮ ತಿಳಿಸಿದ್ದಾರೆ.
ಅವರು ಶನಿವಾರ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪಂದ್ಯಾವಳಿಯ ವಿವರ ನೀಡಿದರು.
ಹೊನಲು ಬೆಳಕಿನ ಪಂದ್ಯಾಟ ಇದಾಗಿದ್ದು ಬೆಂಗಳೂರು, ಗುಲ್ಬರ್ಗ, ಬೆಳಗಾವಿ ಮತ್ತು ಮೈಸೂರು ವಿಭಾಗಗಳಿಂದ ಬಾಲಕ ಬಾಲಕಿಯರ ತಲಾ 4 ತಂಡಗಳು ಭಾಗವಹಿಸಲಿವೆ. ದ.ಕ. ಜಿಲ್ಲೆಯ 2 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಇದರಲ್ಲಿ ಮುಂಡಾಜೆ ಮತ್ತು ಎನ್.ಎಂ.ಪಿ.ಟಿ. ತಂಡಗಳು ಸೇರಿವೆ. ಈ ಸ್ಪರ್ಧೆಯನ್ನು ತಾಲೂಕಿನಲ್ಲಿ ಆಯೋಜಿಸಲು ಸಿಕ್ಕಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಪಂದ್ಯಾವಳಿಯನ್ನು ನ.15ರಂದು ಮಧ್ಯಾಹ್ನ 3.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಶಾಸಕ ಕೆ. ವಸಂತ ಬಂಗೇರ ಅಧ್ಯಕ್ಷತೆ ವಹಿಸಲಿದ್ದು, ಎಸ್‌ಡಿಎಂ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು. ಮುಖ್ಯ ಆಹ್ವಾನಿತರಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಸಚಿವರಾದ ಯು.ಟಿ. ಖಾದರ್, ಕೆ. ಅಭಯಚಂದ್ರ ಜೈನ್, ಜಿಪಂ ಅಧ್ಯಕ್ಷ ಕೆ. ಕೊರಗಪ್ಪ ನಾಯ್ಕ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಎಸ್. ಅಂಗಾರ, ಶಕುಂತಲಾ ಟಿ. ಶೆಟ್ಟಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.