ದಕ್ಷಿಣ ಕನ್ನಡ

ಬ್ಯಾನರ್ ಅಳವಡಿಕೆ: ನಿಯಮ ಪಾಲನೆಗೆ ಸೂಚನೆ

Published On :

ಸುಳ್ಯ: ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಬಂಟಿಂಗ್ಸ್ಗಳನ್ನು ಅಳವಡಿಸುವ ಸಂದರ್ಭಗಳಲ್ಲಿ ಸ್ಥಳೀಯ ಪಂಚಾಯಿತಿನಿಂದ ಅನುಮತಿ ಸೇರಿದಂತೆ ಇನ್ನಿತರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ಆರ್. ಉಮೇಶ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಗ್ರಾಮ ಕರಣಿಕರಿಗೆ ಸೂಚಿಸಿದ್ದಾರೆ. ತಾಲೂಕು ಪಂಚಾಯಿತಿ ಅಧ್ಯಕ್ಷೆ ಗುಣವತಿ ಕೊಲ್ಲಂತ್ತಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಕಂದಾಯ ಇಲಾಖೆ ಮತ್ತು ಅಭಿವೃದ್ಧಿ ಇಲಾಖೆಯ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.  ಇತ್ತೀಚಿನ ದಿನಗಳಲ್ಲಿ ಬ್ಯಾನರ್ ಅಳವಡಿಕೆಯಿಂದಾಗಿ ಹಲವೆಡೆ ಅನೇಕ ಅಹಿತಕರ ಘಟನೆಗಳು ನಡೆದಿರುವ ಕುರಿತು ಹಾಗೂ ಬೀದಿ ದನಗಳನ್ನು ಸಂರಕ್ಷಿಸಲು ದೊಡ್ಡಿ ನಿರ್ಮಿಸಲು ಆಯಾ ಪಂಚಾಯಿತಿನಿಂದ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಸಬ್ ಇನ್ಸ್ಪೆಕ್ಟರ್ ರವಿಯವರು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು.  ಈ ಕುರಿತು ಮಾತನಾಡಿದ ಜಿ.ಪಂ. ಉಪ ಕಾರ್ಯದರ್ಶಿ, ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಬಂಟಿಂಗ್ಸ್ಗಳನ್ನು ಅಳವಡಿಸುವ ಸಂದರ್ಭಗಳಲ್ಲಿ ಪಟ್ಟಣ ಪಂಚಾಯಿತಿ ಅಥವಾ ಗ್ರಾಮ ಪಂಚಾಯಿತಿನಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಎಷ್ಟು ದಿನಕ್ಕಾಗಿ ಅನುಮತಿ ನೀಡಲಾಗಿದೆ ಎಂಬುದನ್ನು  ಆಯಾ ಬ್ಯಾನರ್ಗಳಲ್ಲಿ ನಮೂದಿಸಬೇಕು. ನಿಗದಿತ ಸಮಯ ಕಳೆದ ಅದನ್ನು ಸಂಬಂಧಪಟ್ಟವರು ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಅದನ್ನು ತೆರವುಗೊಳಿಸುವ ಸಂಪೂರ್ಣ ಅಧಿಕಾರ ಪಂಚಾಯಿತಿಗೆ ಇದೆ ಎಂದು ಹೇಳಿದರು.
ಪಂಚಾಯಿತಿ ಸೂಚನಾ ಫಲಕದಲ್ಲಿಯೂ ಈ ಕುರಿತ ವಿವರಗಳನ್ನು ಪ್ರದರ್ಶಿಸಬೇಕು ಎಂದು ಆದೇಶ ನೀಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಬಳಕೆ ಉದ್ದೇಶಕ್ಕಾಗಿ  ಮೀಸಲಿಡುವಂತೆ ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಸ್. ಸತೀಶ್ ಸಲಹೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.