ಸುಳ್ಯ: ಜಾಗಿಂಗ್ ಹೋದವರ ಮೇಲೆ ಎರಗಿದ ಹುಚ್ಚು ನಾಯಿ
ಸುಳ್ಯ: ನಸುಕಿನಲ್ಲಿ ಜಾಗಿಂಗ್ ಮಾಡುತ್ತಿದ್ದವರ ಮೇಲೆ ಹುಚ್ಚು ನಾಯಿಯೊಂದು ದಾಳಿ ನಡೆಸಿ 20ರಿಂದ 25 ಮಂದಿಗೆ ಕಚ್ಚಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿರುವ ಘಟನೆ ಗುರುವಾರ ನಡೆದಿದೆ. ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ. ರೇಣುಕಾಪ್ರಸಾದ್ ಕಾಂತಮಂಗಲದ ತಮ್ಮ ಮನೆಯಿಂದ ಗುರುವಾರ ನಸುಕಿನ 5.30ರ ಸಮಯಕ್ಕೆ ಜಾಗಿಂಗ್ ಹೋಗುತ್ತಿದ್ದಾಗ ರಸ್ತೆಯಲ್ಲಿ ಹುಚ್ಚು ನಾಯಿಯೊಂದು ಅವರನ್ನು ಕಚ್ಚಿದೆ. ಅದೇ ನಾಯಿ ನೇರವಾಗಿ ಸುಳ್ಯಕ್ಕೆ ಆಗಮಿಸಿ ಶ್ರೀರಾಂಪೇಟೆಯಲ್ಲಿ ವಾಕಿಂಗ್ ಹೋಗುತ್ತಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿಗೆ ಕಚ್ಚಿದೆ. ಅಲ್ಲದೆ ಬೀದಿ ನಾಯಿಗಳಿಗೂ ಕಚ್ಚಿದ್ದು, ಬಳಿಕ ಸ್ಥಳೀಯರು ಅದನ್ನು ಕೊಂದು ಹಾಕಿದ್ದಾರೆ. ಘಟನೆಯಲ್ಲಿ ತೀವ್ರ ಗಾಯಗೊಂಡ ರವಿಯನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿದೆ. ರೇಣುಕಾಪ್ರಸಾದ್ ಸೇರಿದಂತೆ ಇತರರರು ನೇರವಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಬೆನಕ ಕಲಾ ಹಾಗೂ ಕ್ರೀಡಾ ಸಂಘದವರು ತಾಲೂಕು ಕಚೇರಿ ಎದುರು ದಿಢೀರ್ ಪ್ರತಿಭಟನೆ ನಡೆಸಿ ಬೀದಿ ನಾಯಿಗಳ ನಿಯಂತ್ರಿಸುವಂತೆ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು. ರಕ್ಷಣಾ ವೇದಿಕೆ ಅಧ್ಯಕ್ಷ ಪದ್ಮನಾಭ ಹರ್ಲಡ್ಕ, ಬೆನಕ ಕ್ರೀಡಾ ಸಂಘದ ಸ್ಥಾಪಕಾಧ್ಯಕ್ಷ ಮುರಳಿ ಮಾವಂಜಿ, ಅಧ್ಯಕ್ಷ ಯತೀಶ್ ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

