ದಕ್ಷಿಣ ಕನ್ನಡ

'ಮತಾಂತರ ಕೇಂದ್ರಗಳಿಂದ ರಕ್ಷಿಸಿ'

Published On :

ಮಂಗಳೂರು: ಹಿಂದೂ ಯುವತಿಯರನ್ನು ಲವ್‌ಜಿಹಾದ್ ಮೂಲಕ ಉಗ್ರ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳು ಹೇಳಿದರೂ ಸುಮ್ಮನಿದ್ದ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಶ್ರೀರಾಮ ಸೇನೆ ಹೇಳಿದೆ.
ಬಡ ಹಿಂದೂ ಹೆಣ್ಮಕ್ಕಳನ್ನು ಆಮಿಷ ತೋರಿಸಿ ಕೇರಳದ ಪೊನ್ನಾಣಿಗೆ ಕರೆದುಕೊಂಡು ಹೋಗಿ ಮತಾಂತರಗೊಳಿಸಿ ಉಗ್ರವಾದಕ್ಕೆ ಬಳಸಿಕೊಳ್ಳಲಾಗುತ್ತಿದೆ. ಪೊಲೀಸ್ ಇಲಾಖೆ ಮತಾಂತರ ಕೇಂದ್ರಗಳಿಗೆ ದಾಳಿ ಮಾಡಿ ಅಮಾಯಕ ಹೆಣ್ಮಕ್ಕಳನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಹಿಂದೂ ಸಮಾಜ ಇಂಥ ಕೇಂದ್ರಗಳಿಗೆ ದಾಳಿ ಮಾಡಿ ದ್ರೋಹಿಗಳನ್ನು ಶಿಕ್ಷಿಸಬೇಕಾದೀತು ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕ ಎಚ್ಚರಿಸಿದೆ.  ಬಂಧಿತ ಉಗ್ರ ಯಾಸಿನ್ ಭಟ್ಕಳ್ ವಿಚಾರಣೆಯಲ್ಲಿ ಕರಾವಳಿಯ ಮುಸ್ಲಿಂ ಸಂಘಟನೆಗಳ ಜತೆ ನಿಕಟ ಸಂಪರ್ಕ ಇರುವುದನ್ನು ಒಪ್ಪಿಕೊಂಡಿದ್ದಾನೆ. ಅಂಥ ಸಂಘಟನೆಗಳ ಹೆಸರನ್ನು ಸರ್ಕಾರ ಬಹಿರಂಗಪಡಿಸಬೇಕು. ಸಂಘಟನೆ ನಾಯಕರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಆರ್.ಶೆಟ್ಟಿ ಆಗ್ರಹಿಸಿದ್ದಾರೆ.
ಜುಗಾರಿ: 7 ಮಂದಿ ಸೆರೆ
ಗಂಗೊಳ್ಳಿ: ಇಲ್ಲಿನ ತೌಹಿದ್ ಶಾಲೆ ಎದುರಿನ ಕಾಡಿನಲ್ಲಿ ಜುಗಾರಿ ಆಟ ಆಡುತ್ತಿದ್ದ 7 ಜನ ಆರೋಪಿಗಳನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಆಟಕ್ಕೆ ಉಪಯೋಗಿಸಿದ ರು. 5170 ಹಾಗೂ ಇನ್ನಿತ್ತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.