ದಕ್ಷಿಣ ಕನ್ನಡ

ಸುದ್ದಿ ಸಂಕ್ಷೇಪ

Published On :

ಮಡಿಕೇರಿ: 23ರಂದು ಮಿನಿ ಉದ್ಯೋಗಮೇಳ
ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ 23 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ  ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಮಡಿಕೇರಿ ಮಹೀಂದ್ರಾ ಹಾಲಿಡೇಸ್ ಆ್ಯಂಡ್ ರೆಸಾರ್ಟ್, ಮಂಗಳೂರು ಎಂಫಾಸಿಸ್, ಮೈಸೂರು, ಎಚ್.ಟಿ.ಎಂ.ಟಿ. ಮೋರ್(ಆದಿತ್ಯಾ ಬಿರ್ಲಾ ಗ್ರೂಪ್, ಮಂಗಳೂರು), ಯುರೇಕಾ ಫೋರ್ಬ್ಸ್  ಸಂಸ್ಥೆಗಳು ಭಾಗವಹಿಸುತ್ತಿದ್ದು, ಸಂಸ್ಥೆಗಳಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುವುದು. ಎಸ್‌ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಪದವಿ, ಐ.ಟಿ.ಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ದಾಖಲಾತಿಗಳು ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಗಳು. ಅಭ್ಯರ್ಥಿಯ ಸ್ವ ವಿವರಗಳ (ಬಯೋ-ಡಾಟಾ) ಪ್ರತಿಗಳು, ಅಭ್ಯರ್ಥಿಯ ಫೊಟೋಗಳ ದಾಖಲಾತಿಗಳನ್ನು ನೇರ ಸಂದರ್ಶನಕ್ಕೆ ಹಾಜರಾಗುವಾಗ ತರಬೇಕಾಗಿರುತ್ತದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅದಿಕಾರಿಯಾದ ಸಿ. ಜಗನಾಥ್ ತಿಳಿಸಿದ್ದಾರೆ.
25, 30ರಂದು ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆ
ಕುಶಾಲನಗರ: ಕುಶಾಲನಗರ ಗಣಪತಿ ಜಾತ್ರೋತ್ಸವ ಅಂಗವಾಗಿ ನ.25ರಂದು 1ರಿಂದ 3ನೇ ತರಗತಿ ಮಕ್ಕಳಿಗೆ ಜಿಲ್ಲಾಮಟ್ಟದ ಛದ್ಮವೇಷ ಸ್ಪರ್ಧೆ ಮತ್ತು ನ.30ರಂದು ಜಾತ್ರಾ ಮೈದಾನದಲ್ಲಿ ರಾಜ್ಯ ಮಟ್ಟದ ಡ್ಯಾನ್ಸ್ ಡ್ಯಾನ್ಸ್ ಸ್ಪರ್ಧೆ ಹಮ್ಮಿಕೊಳ್ಳಳಾಗಿದೆ ಎಂದು ದೇವಾಲಯ ಸಮಿತಿಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ- 97400 06784, 9482022221ನ್ನು ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.