ದಕ್ಷಿಣ ಕನ್ನಡ

ನಾಳೆ ಇಂದಿರಾಗಾಂಧಿ ಜಯಂತಿ

Published On :

ಸೋಮವಾರಪೇಟೆ: ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿಯವರ ಹುಟ್ಟುಹಬ್ಬದ ಅಂಗವಾಗಿ ನ.19ರಂದು ದೇವಾಲಯ, ದರ್ಗಾ ಹಾಗೂ ಚರ್ಚ್‌ಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 9.30ಕ್ಕೆ ನಗರದ ಖಾಸಗಿ ಬಸ್‌ನಿಲ್ದಾಣ ಸಮೀಪದ ವಿದ್ಯಾಗಣಪತಿ ದೇವಾಲಯದಲ್ಲಿ, ನಂತರ ಮುಖ್ಯರಸ್ತೆಯಲ್ಲಿರುವ ದರ್ಗಾದಲ್ಲಿ, ನಂತರ ಹಾನಗಲ್‌ನ ಓ.ಎಲ್.ವಿ. ಚರ್ಚ್‌ನಲ್ಲಿ ವಿಶೇಷ ಪೂಜೆ ಹಮ್ಮೊಳ್ಳಲಾಗಿದ್ದು ಸಮಾಜದಲ್ಲಿ ಶಾಂತಿ, ಸಹಬಾಳ್ವೆಗಾಗಿ ವಿಶೇಷ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ.
ಸಂಜೆ 7 ಗಂಟೆಗೆ ನಗರದ ಜೇಸೀ ವೇದಿಕೆಯ ಮುಂಭಾಗದಲ್ಲಿ ಇಂದಿರಾಜೀಯವರ ಹೆಸರಿನಲ್ಲಿ ಜ್ಯೋತಿಯನ್ನು ಬೆಳಗುವ ವಿಭಿನ್ನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ. ನಾಗರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.