ದಕ್ಷಿಣ ಕನ್ನಡ

ಇಂದು ಇಂದಿರಾಗಾಂಧಿ ಜನ್ಮದಿನಾಚರಣೆ

Published On :

ಮೂಲ್ಕಿ: ಮೂಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ 96ನೇ ಜನ್ಮ ದಿನಾಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ 19ರಂದು ಇಲ್ಲಿನ ಜಿಎಸ್ಬಿ ಸಭಾಗೃಹದಲ್ಲಿ ಜರುಗಲಿದೆ. ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪಯ್ಯೊಟ್ಟು ಸದಾಶಿವ ಸಾಲ್ಯಾನ್ ಅವರನ್ನು ಸನ್ಮಾನಿಸಲಿದ್ದಾರೆ. ರಾಜ್ಯ ಯುವಜನ ಮತ್ತು ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ರಾಜ್ಯ ನಗರಾಭಿವೃದ್ಧಿಸಚಿವ ವಿನಯ ಕುಮಾರ್ ಸೊರಕೆ ಭಾಗವಹಿಸಲಿದ್ದಾರೆ. ಮೂಲ್ಕಿ ನ.ಪಂ. ಅಧ್ಯಕ್ಷ ಶಶಿಕಾಂತ್ ಶೆಟ್ಟಿ, ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಯಶವಂತಿ ಆಳ್ವ, ಕಾರ್ಯದರ್ಶಿ ಸರಸು ಡಿ. ಬಂಗೇರ, ಶಾಲೆಟ್ ಪಿಂಟೋ, ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಮಮತಾ ಗಟ್ಟಿ, ಕೆಪಿಸಿಸಿ ಸದಸ್ಯೆ ಜಯಶ್ರೀ ಕೃಷ್ಣರಾಜ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಇಂದು ವಿದ್ಯುತ್ ಕಡಿತ
ಮಂಗಳೂರು: ಕಾವೂರು-ಮಣ್ಣಗುಡ್ಡೆ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಯಲಿರುವುದರಿಂದ ಮಣ್ಣಗುಡ್ಡೆ ಉಪಕೇಂದ್ರದಲ್ಲಿ 19 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ಕಡಿತವಾಗಲಿದೆ. ಕೊಟ್ಟಾರ, ಕೋಡಿಕಲ್, ಉರ್ವಸ್ಟೋರ್, ಅಶೋಕನಗರ, ಹೈಗೆಬೈಲ್, ದಂಬೆಲ್, ಉರ್ವ, ಬೋಳೂರು, ಚಿಲಿಂಬಿ, ಮಠದಕಣಿ, ಬೊಕ್ಕಪಟ್ಣ, ಹ್ಯಾಟ್ಹಿಲ್, ಲೇಡಿಹಿಲ್, ಲಾಲ್ಬಾಗ್, ಬಳ್ಳಾಲ್ಬಾಗ್, ಎಂ.ಜಿ. ರೋಡ್, ಅಳಕೆ, ಕುದ್ರೋಳಿ, ಕೋಡಿಯಾಲ್ಬೈಲ್, ಕೋಡಿಯಾಲ್ಗುತ್ತು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.