ಇಂದು ಬೀಡಿ ಕಾರ್ಮಿಕರ ಬೃಹತ್ ಪ್ರತಿಭಟನೆ
ಬೆಳ್ತಂಗಡಿ: ಬೀಡಿ ಕಾರ್ಮಿಕರಿಗೆ ದೇಶಾದ್ಯಂತ ಸಾವಿರ ಬೀಡಿಗೆ ರು. 200 ಕನಿಷ್ಠ ಕೂಲಿ ಮತ್ತಿತರ 12 ಬೇಡಿಕೆಗಳಿಗೆ ಒತ್ತಾಯಿಸಿ ಬೀಡಿ ಕಾರ್ಮಿಕರ ರಾಷ್ಟ್ರವ್ಯಾಪಿ ಮುಷ್ಕರ ನ.19ರಂದು ನಡೆಯಲಿದೆ. ಅಂದು ಬೀಡಿ ಕಾರ್ಮಿಕರಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನಾ ಪ್ರದರ್ಶನ ನಡೆಯಲಿದೆ ಎಂದು ಅಖಿಲ ಭಾರತ ಬೀಡಿ ಕಾರ್ಮಿಕರ ಒಕ್ಕೂಟ ರಾಜ್ಯ ಕಾರ್ಯದರ್ಶಿ ಸಯ್ಯದ್ ಮಜೀರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕೂಟವು ಬೆಳ್ತಂಗಡಿಯಲ್ಲಿ ಸಭೆ ಸೇರಿ ಬೀಡಿ ಉದ್ಯಮವಿರುವ ರಾಜ್ಯದ 16 ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸುವುದೆಂದು ತೀರ್ಮಾನಿಸಿದೆ ಎಂದರು.
ಸಿಬಿಐ ತನಿಖೆಯಾಗಲಿ: ಬೀಡಿ ಕಾರ್ಮಿಕರ ಮಗಳಾದ ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣವನ್ನು ಸಿಐಟಿಯು ಪ್ರಬಲವಾಗಿ ಖಂಡಿಸುತ್ತದೆ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು. ತನಿಖೆ ಪ್ರಭಾವಿಗಳನ್ನು ಹಿಮ್ಮೆಟ್ಟಿಸುವ ರೀತಿಯಲ್ಲಿ ನಡೆಯಬೇಕು ಎಂದು ಒಕ್ಕೂಟದ ಸಹ ಕಾರ್ಯದರ್ಶಿ ಸಿ. ಕುಮಾರಿ ಆಗ್ರಹಿಸಿದರು. ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಮಹಾಬಲ ಒಡೆಯರ್, ರಾಜ್ಯ ಕಾರ್ಯದರ್ಶಿ ಒಬೈದುಲ್ಲಾ, ಕಟ್ಟಡ ಕಾರ್ಮಿಕ ಸಂಘದ ವಸಂತ ನಡ, ಸಿಪಿಐಎಂ ತಾಲೂಕು ಕಾರ್ಯದರ್ಶಿ ಶಿವಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

