ದಕ್ಷಿಣ ಕನ್ನಡ

ಸುಬ್ರಹ್ಮಣ್ಯ: ಕುಡಿವ ನೀರು, ಒಳಚರಂಡಿ ಕಾಮಗಾರಿ ಶೀಘ್ರ ಆರಂಭ- ಅಂಗಾರ

Published On :

ಸುಬ್ರಹ್ಮಣ್ಯ: ಅಭಿವೃದ್ಧಿ ಹೊಂದುತ್ತಿರುವ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಬಹುದಿನಗಳ ಕನಸಾದ ಕುಡಿಯುವ ನೀರಿನ ಯೋಜನೆ ಮತ್ತು ಒಳಚರಂಡಿ ವ್ಯವಸ್ಥೆಯನ್ನು 25.60 ಕೋಟಿ ವೆಚ್ಚದ ಅನುದಾನದಲ್ಲಿ ಶೀಘ್ರವೇ ಆರಂಭಿಸಲಾಗುವುದು ಎಂದು ಶಾಸಕ ಎಸ್. ಅಂಗಾರ  ಹೇಳಿದ್ದಾರೆ.
ಸುಬ್ರಹ್ಮಣ್ಯದಲ್ಲಿ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕರು, ಈ ಕಾಮಗಾರಿಗಳನ್ನು ಮುಂದಿನ ತಿಂಗಳಲ್ಲೇ ಆರಂಭಿಸಲಾಗುವುದು, ಈ ಎರಡು ಕಾಮಗಾರಿಗಳು ದೇವಳದ ವತಿಯಿಂದಲೇ ನಡೆಯಲಿದ್ದು, ಒಳಚರಂಡಿ ವ್ಯವಸ್ಥೆಗಾಗಿ ದೇವಳದ ವತಿಯಿಂದ ಜಲ ಮಂಡಳಿಗೆ ಕಳೆದ 5 ವರ್ಷಗಳ ಹಿಂದೆ ಮುಂಗಡ ಹಣ ಪಾವತಿಸಲಾಗಿತ್ತು. ಕಾಮಗಾರಿಗೆ ಸರ್ಕಾರ ಮಂಜೂರಾತಿ ನೀಡಿದ್ದು, ಅದರಂತೆ ಕಾಮಗಾರಿಗಳು ನಡೆಯಲಿದೆ. ಶ್ರೀ ಕ್ಷೇತ್ರದ 180 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ನ ಅಂಗವಾಗಿ ಈ ಕಾಮಗಾರಿ ನಡೆಯಲಿದೆ ಎಂದು ಶಾಸಕ ಅಂಗಾರ ತಿಳಿಸಿದರು.
ಬೆಂಗಳೂರಿನ ಸುಜಲಾ ಸ್ಟ್ರಕ್ಚರ್ಸ್ ಕಾಮಗಾರಿಯ ಟೆಂಡರ್ ಪಡೆದುಕೊಂಡಿದೆ. ಅವಶ್ಯಕತೆಗೆ ಅನುಗುಣವಾಗಿ ಟ್ಯಾಂಕ್ ನಿರ್ಮಿಸಿ ಇಡೀ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಬ್ರಹ್ಮಣ್ಯ ಭಟ್, ಕಿಶೋರ್ ಶಿರಾಡಿ, ಮೋನಪ್ಪ ಮಾನಾಡು, ಹರೀಶ್ ಕಂಜಿಪಿಲಿ, ಚಿದಾನಂದ ಕಂದಡ್ಕ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.