ದಕ್ಷಿಣ ಕನ್ನಡ

ಸ್ವಾಮೀಜಿಗಳ ಅವಹೇಳನ: ವಿಹಿಂಪ ಜಿಲ್ಲಾ ಕಾರ್ಯದರ್ಶಿ ಬಂಧನಕ್ಕೆ ಆಗ್ರಹ

Published On :

ಪುತ್ತೂರು: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ ಭಟ್ ಅವರು ಸ್ವಾಮೀಜಿಗಳ ಕುರಿತು ಕೀಳು ಮಟ್ಟದ ಹೇಳಿಕೆ ನೀಡಿದ್ದು, ಇದು ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ಸಮಸ್ಥ ಹಿಂದೂಗಳ ನೆರವಿನೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾವು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಹೇಮನಾಥ ಶೆಟ್ಟ ಕಾವು ಎಚ್ಚರಿಸಿದ್ದಾರೆ.
ಅವರು ಮಂಗಳವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.  ಸ್ವಾಮೀಜಿಗಳ ಬಗ್ಗೆ ಮಾನಹಾನಿಕಾರಕ ಹೇಳಿಕೆ ನೀಡಿರುವುದು ಸಣ್ಣ ವಿಚಾರವಲ್ಲ. ಪೊಲೀಸರು ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಹೇಳಿಕೆ ನೀಡಿದ ವಿಹಿಂಪ ಜಿಲ್ಲಾ ಕಾರ್ಯದರ್ಶಿ, ಬಜರಂಗದಳದ ಜಿಲ್ಲಾ ಸಂಚಾಲಕ ಹಾಗೂ ಇತರರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಸ್ವಾಮೀಜಿಗಳ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ನಾಲ್ವರ ವಿರುದ್ಧ ಕ್ರಿಮಿನಲ್ ದಾವೆ ಹೂಡಲಾಗಿದ್ದು, ಇದರೊಂದಿಗೆ ಶಾಂತಿ ಕದಡಲು ಯತ್ನಿಸಿದ ಇವರ ವಿರುದ್ಧ ನ್ಯಾಯಾಲಯಕ್ಕೆ ದೂರು ನೀಡಲಾಗಿದೆ ಎಂದರು.
ಮಠಂತಬೆಟ್ಟು ಮಹಿಷಮರ್ಧಿನಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು, ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ಉರ್ಲಾಂಡಿ ನಾಗರಕ್ತೇಶ್ವರಿ ದೈವಸ್ಥಾನದ ಅಧ್ಯಕ್ಷ ಲೋಕೇಶ್ ಹೆಗ್ಡೆ, ಕರ್ಮಲ ದುರ್ಗಾಪರಮೇಶ್ವರಿ ದೇವಸ್ಥಾನದ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಪುತ್ತೂರು ದೇವತಾ ಸಮಿತಿ ಸದಸ್ಯ ಕಿಟ್ಟಣ್ಣ ಗೌಡ ಮತ್ತು ಭರಣ್ಯ ದುರ್ಗಾಪರಮೇಶ್ವರಿ ದೇವಸ್ಥಾನದ ಸದಸ್ಯ ಪ್ರವೀಣ ಭರಣ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.