ದಕ್ಷಿಣ ಕನ್ನಡ

ರೈಲು ಡಿಕ್ಕಿಯಾಗಿ ಮಹಿಳೆ ಸಾವು

Published On :

ಮಂಗಳೂರು: ಕೊಲ್ಯ ಬಳಿ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ಸೋಮೇಶ್ವರ ದ್ವಾರಕನಗರ  ಜಯಂತಿ ಪ್ರಭು (62) ಮೃತಪಟ್ಟಿದ್ದಾರೆ. ಬೆಳಗ್ಗೆ 9 ಗಂಟೆಗೆ ಅಂಗಡಿಯಿಂದ ಪಡಿತರ ಅಕ್ಕಿ ತೆಗೆದುಕೊಂಡು ಮನೆಗೆ ಹೋಗುವಾಗ ಹಳಿ ದಾಟುತ್ತಿದ್ದರು. ಇದೇ ವೇಳೆಗೆ ರೈಲು ಡಿಕ್ಕಿಯಾಗಿ ಮೃತಪಟ್ಟರು.
ಬೈಕ್-ಬೈಕ್ ಡಿಕ್ಕಿ: ಸಾವು
ಮಂಗಳೂರು: ಮೇಸ್ತ್ರಿ ಕೆಲಸ ಮಾಡುತ್ತಿದ್ದ ನೀರುಮಾರ್ಗ ಚಂದ್ರಹಾಸ (22 ) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಇನ್ನೊಂದು ಬೈಕ್ ಡಿಕ್ಕಿ ಹೊಡೆಯಿತು. ಕೆಳಕ್ಕೆ ಬಿದ್ದ ಚಂದ್ರಹಾಸ ಗಂಭೀರ ಗಾಯಗೊಂಡು ಮೃತಪಟ್ಟರು.
ಕುಂದಾಪುರ: ವ್ಯಕ್ತಿ ನಾಪತ್ತೆ
ಕುಂದಾಪುರ: ಹೊನ್ನಾವರಕ್ಕೆ ಕೆಲಸಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೋಗಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರು ಕುಂದಾಪುರ ನಿವಾಸಿ ವಿಘ್ನೇಶ. ಅವರು ಕುಂದಾಪುರ ಆಸುಪಾಸಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಕೆಲಸದ ವಿಷಯವಾಗಿ ಹೊನ್ನಾವರಕ್ಕೆ ಹೋಗಿ ಬರುವುದಾಗಿ ತಿಳಿಸಿದ್ದರು. ಆದರೆ ಇದುವರೆಗೆ ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.