ದಕ್ಷಿಣ ಕನ್ನಡ

'ಜನರಿಗೆ ಪ್ರಾಣ ರಕ್ಷಣೆಯ ಭರವಸೆ ಬೇಕಿದೆ'

Published On :

ಪುತ್ತೂರು:  ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆದ ಬಳಿಕ ಸರ್ಕಾರ ಸಿಬಿಐಗೆ ಒಪ್ಪಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಮೇಲೆ ನಂಬಿಕೆಯಿರುವ ಕಾರಣ ನಾವು ಸಿಬಿಐ ತನಿಖೆ ನಂಬುತ್ತೇವೆ. ಆದರೆ ಜನರಿಗೆ ಪ್ರಾಣ ರಕ್ಷಣೆಯ ಭರವಸೆ ಬೇಕಾಗಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಿಪಿಎಂ ರಾಜ್ಯ ಸಮಿತಿ ಸದಸ್ಯ ವಸಂತ ಆಚಾರಿ ಆರೋಪಿಸಿದ್ದಾರೆ.  
  ಶುಕ್ರವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,   ಸೌಜನ್ಯಾ ಪ್ರಕರಣದ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ನಡೆಸಿದ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ಹೋರಾಟಗಾರರ ಮೇಲೆ ಮಾನನಷ್ಟ ಹಾಕುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ರಾಜಕೀಯ ಮುಖಂಡರಿಂದ ನಡೆಯುತ್ತಿದೆ. ಆದರೆ ನಮ್ಮ ಹೋರಾಟ ನಿಲ್ಲದು ಎಂದರು.   ಸುದ್ದಿಗೋಷ್ಠಿಯಲ್ಲಿ ಸಿಪಿಎಂ ಜಿಲ್ಲಾ ಮುಖಂಡ ಸುನಿಲ್ ಕುಮಾರ್ ಬಜಾಲ್ ಮತ್ತು ತಾಲೂಕು ಕಾರ್ಯದರ್ಶಿ ಪಿ.ಕೆ. ಸತೀಶನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.