ದಕ್ಷಿಣ ಕನ್ನಡ

ನಾಳೆ ಸ್ವ ಸಹಾಯ ಸಂಘಗಳ ದಶಮಾನೋತ್ಸವ

Published On :

ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆಮ್ಮಿಂಜೆ ವಲಯದ ಸ್ವ ಸಹಾಯ ಸಂಘಗಳ ಒಕ್ಕೂಟದ ದಶಮಾನೋತ್ಸವ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಮೊಟ್ಟೆತ್ತಡ್ಕ ಚಾಮುಂಡೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಕೇಂದ್ರ ಸಮಿತಿ ಅಧ್ಯಕ್ಷ ಉಮೇಶ್ ಡಿ.ಕೆ ತಿಳಿಸಿದ್ದಾರೆ.  ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭೂಮಿಕಾ, ಮಂಜುನಾಥೇಶ್ವರ ಮತ್ತು ಸಂಜಯನಗರ ಸ್ವ ಸಹಾಯ ಸಂಘದ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಒಕ್ಕೂಟ ವ್ಯಾಪ್ತಿಯ 51 ಸ್ವ ಸಹಾಯ ಸಂಘಗಳು ಭಾಗವಹಿಸಲಿವೆ. ಕಾರ್ಯಕ್ರಮವನ್ನು ಬೊಳ್ವಾರು ಸಾಂಸ್ಕೃತಿಕ ಕಲಾ ಕೇಂದ್ರದ ನಿರ್ದೇಶಕ ಚಿದಾನಂದ ಕಾಮತ್ ಕಾಸರಗೋಡು ಉದ್ಘಾಟಿಸಲಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಕೇಂದ್ರ ಸಮಿತಿ ಅಧ್ಯಕ್ಷ ಉಮೇಶ್ ಡಿ.ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಜನಜಾಗೃತಿ ವೇದಿಕೆಯ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಪ್ರಮಾಣ ಪತ್ರ ವಿತರಿಸಲಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ರಾಧಾಕೃಷ್ಣ ರಾವ್ ಭಾಗವಹಿಸಲಿದ್ದಾರೆ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆಮ್ಮಿಂಜೆ ವಲಯದ ಸೇವಾ ಪ್ರತಿನಿಧಿಗಳಾದ ಸೀತಾರಾಮ ಆಚಾರ್ಯ, ಗಿರೀಶ್ ಆಚಾರ್ಯ, ಪುತ್ತೂರು ವಲಯ ಮೇಲ್ವಿಚಾರಕ ಶೇಖರ್.ಜೆ ಮತ್ತು ಲಕ್ಷ್ಮೀ ಸತೀಶ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.