ವಿಶ್ವಕರ್ಮ ಸಮಾಜದ ಸಮುದಾಯ ಭವನ ಲೋಕಾರ್ಪಣೆ
ಬಂಟ್ವಾಳ: ವಿಟ್ಲ ಸಮೀಪದ ಕಾನತ್ತಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀವಿಶ್ವಕರ್ಮ ಸಮಾಜದ ಸಮುದಾಯ ಭವನ ಶುಕ್ರವಾರ ಉದ್ಘಾಟನೆಗೊಂಡಿತು.
ಉಡುಪಿ ಆನೆಗುಂದಿ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ನೂತನ ಸಮುದಾಯ ಭವನವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿದರು.
ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಹಾಸನ ಅರೆಮಾದನ ಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಶ್ರೀ ಸುಜ್ಞಾನ ಪೀಠದ ಶ್ರೀ ಗುರು ಶಿವ ಸುಜ್ಞಾನ ಮೂರ್ತಿ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.
ಪುತ್ತೂರು ಶಾಸಕಿ ಟಿ. ಶಕುಂತಳಾ ಶೆಟ್ಟಿ ಮಾತನಾಡಿದರು. ಮಡಿಕೇರಿ ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ಅರಮನೆಯ ವಿ. ಜನಾರ್ದನ ವರ್ಮ ಅರಸರು, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಮಂಗಳೂರು ಶ್ರೀ ವಿನಾಯಕ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ, ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಮೌನೇಶ್ ಆಚಾರ್ಯ, ಮಾಜಿ ಅಧ್ಯಕ್ಷ ಕಾನ ಈಶ್ವರ ಭಟ್ ಭಾಗವಹಿಸಿದ್ದರು.
ಸಮಾರಂಭದಲ್ಲಿ ಸಮುದಾಯ ಭವನಕ್ಕೆ ಸ್ಥಳದಾನ ಮಾಡಿದ ಕಾನತ್ತಡ್ಕ ಗಣಪತಿ ಆಚಾರ್ಯ ಅವರನ್ನು ಗೌರವಿಸಲಾಯಿತು.
ಕಾನತ್ತಡ್ಕ ವಿಶ್ವಕರ್ಮ ಸಮಾಜ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಆಚಾರ್ಯ ಮಂಡ್ಯೂರು, ಕೋಶಾಧಿಕಾರಿ ಸೀತಾರಾಮ ಆಚಾರ್ಯ ಮುಡಿಪು, ವಿಶ್ವಕರ್ಮ ಸಮಾಜ ಸೇವಾ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಬಾಲಕೃಷ್ಣ ಆಚಾರ್ಯ ಉಬರಡ್ಕ, ಸ್ವಾಗತ ಸಮಿತಿ ಅಧ್ಯಕ್ಷ ನಾರಾಯಣ ಆಚಾರ್ಯ ನೆಗಳಗುಳಿ ಇದ್ದರು.
ವಿಶ್ವಕರ್ಮ ಸಮಾಜ ಸೇವಾ ಕಟ್ಟಡ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಸುಂದರ ಆಚಾರ್ಯ ನೆಗಳಗುಳಿ ಸ್ವಾಗತಿಸಿದರು. ಕಾನತ್ತಡ್ಕ ವಿಶ್ವಕರ್ಮ ಸಮಾಜ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಆಚಾರ್ಯ ಎರುಂಬು ವಂದಿಸಿದರು. ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಪರಮೇಶ್ವರ ಆಚಾರ್ಯ ಮಂಕುಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ರಾಧಾಕೃಷ್ಣ ಎ. ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

