ದಕ್ಷಿಣ ಕನ್ನಡ

ಸುಳ್ಯದಲ್ಲಿ ಸ್ವಚ್ಛತಾ ಉತ್ಸವ

Published On :

ಸುಳ್ಯ: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೈಜೋಡಿಸಿದಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂದು ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಹೇಳಿದ್ದಾರೆ.
ಅಮರಮೂಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿರುವ ಗ್ರಾಮ ಪಂಚಾಯಿತಿ  ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ವಿಶ್ವ ಶೌಚಾಲಯ ದಿನಾಚರಣೆ- ಸ್ವಚ್ಛತಾ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದಿಂದ ಬರುವ ಅನುದಾನಗಳು ಸರಿಯಾಗಿ ಬಿಡುಗಡೆ ಆಗುತ್ತಿಲ್ಲ. ಬಸವ ವಸತಿ ಫಲಾನುಭವಿಗಳಿಗೆ ವೃಥಾ ತೊಂದರೆ ಕೊಡಲಾಗುತ್ತಿದೆ. ವಸತಿ ನಿಗಮದ ಅಧಿಕಾರಿಗಳು ಹಣ ಬಿಡುಗಡೆಗೆ ದಿನಕ್ಕೊಂದು ಮಾರ್ಗಸೂಚಿ ಕಳುಹಿಸಿಸುತ್ತಿದ್ದಾರೆ ಎಂದವರು ಹೇಳಿದರು. ಪ್ರತಿ ಸಂಪರ್ಕಕ್ಕೂ ಮೀಟರ್ ಅಳವಡಿಸಿ ಕುಡಿಯುವ ನೀರನ್ನು ಪೂರೈಕೆ ಮಾಡುವ ಪಂಚಾಯಿತಿಗಳಿಗೆ ಪ್ರಶಸ್ತಿ ನೀಡಬೇಕು ಎಂದವರು ಸಲಹೆ ಮಾಡಿದರು.
ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತುಳಸಿ ಮದ್ದಿನೇನಿ ಮಾತನಾಡಿ, ಡಿಸಿಬಿ ವಸೂಲಿ ಜಿಲ್ಲೆಯಲ್ಲಿ ಕಡಿಮೆ ಇದೆ. ಸುಳ್ಯ ತಾಲೂಕಿನಲ್ಲಿ ಶೇ.31 ಮಾತ್ರ ಆಗಿದೆ. ಹಲವು ಬಿಲ್ ಕಲೆಕ್ಟರ್‌ಗಳು ಸಂಗ್ರಹಿಸಿದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡುತ್ತಿಲ್ಲ ಎಂಬ ದೂರುಗಳು ಬಂದಿವೆ. ಈ ಕುರಿತು ಪಿಡಿಒಗಳು ಅಂದಿನ ಸಂಗ್ರಹವನ್ನು ಅಂದೇ ಪರಿಶೀಲಿಸಿ ಬ್ಯಾಂಕ್‌ಗೆ ಹಾಕಬೇಕು ಎಂದರು.
ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯರಾದ ಕೆ.ಎಸ್. ದೇವರಾಜ್, ಸರಸ್ವತಿ ಕಾಮತ್, ನವೀನ್ ಕುಮಾರ್ ಮೇನಾಲ, ತಾ.ಪಂ. ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ, ಉಪಾಧ್ಯಕ್ಷ ಹರೀಶ್ ರೈ ದೇರಂಪಾಲು, ಸದಸ್ಯೆ ರಾಜೀವಿ ಉದ್ದಂಪಾಡಿ ಅತಿಥಿಗಳಾಗಿದ್ದರು.
ಡಾ. ನಂದಕುಮಾರ್ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು. ಜಿ.ಪಂ. ಉಪ ಕಾರ್ಯದರ್ಶಿ ಎನ್.ಆರ್. ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲೇಶಪ್ಪ ಸ್ವಾಗತಿಸಿದರು. ಚಂದ್ರಾವತಿ ವಂದಿಸಿದರು. ಮಂಜುಳಾ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.