ದಕ್ಷಿಣ ಕನ್ನಡ

ಟಾಗೋರ್ ಪಾತ್ರದಲ್ಲಿ ಸಚಿವ ಅಭಯಚಂದ್ರ ಜೈನ್!

Published On :

ಮೂಲ್ಕಿ: ರಾಜ್ಯ ಯುವಜನ ಸೇವೆ, ಕ್ರೀಡೆ ಮತ್ತು ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್ ಬೆಳ್ಳಿತೆರೆಗಾಗಿ ಬಣ್ಣ ಹಚ್ಚಲಿದ್ದಾರೆ, ಅವರು ನಟಿಸಲಿರುವುದು ರವೀಂದ್ರನಾಥ ಟಾಗೋರ್ ಪಾತ್ರದಲ್ಲಿ.
ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆಯನ್ನು ಆಧರಿಸಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ತುಳು ಚಲನಚಿತ್ರದ ಚಿತ್ರೀಕರಣ ಡಿ.15ರಂದು ಆರಂಭಗೊಳ್ಳಲಿದ್ದು ಇದರಲ್ಲಿ ಸಚಿವ ಜೈನ್ ನಟಿಸಲಿದ್ದಾರೆ.
ಮೂಲ್ಕಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ, ನಿರ್ದೇಶಕ, ಸ್ಟಂಟ್‌ಮಾಸ್ಟರ್, ನಾಯಕ ನಟ ರಾಜೇಶ್ ಕೋಟ್ಯಾನ್, ಚಿತ್ರ ಏಪ್ರಿಲ್‌ನಲ್ಲಿ ತೆರೆ ಕಾಣಲಿದೆ. ಕಿರುತೆರೆ ನಟ ವೆಂಕಟಾದ್ರಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪಾತ್ರ ನಿರ್ವಹಿಸಲಿದ್ದು, ಚಿನ್ನಾರಿಮುತ್ತ ಖ್ಯಾತಿಯ ವಿಜಯ ರಾಘವೇಂದ್ರ, ಸೂರ್ಯೋದಯ, ಭೂಮಿಕಾ, ಸಂಗೀತಾ ಶೆಟ್ಟಿ, ಭೋಜರಾಜ್ ವಾಮಂಜೂರು, ಅರವಿಂದ ಬೋಳಾರ್ ಮುಂತಾದ ಖ್ಯಾತ ನಟರು ಹಾಗೂ ಜಯ ಸಿ. ಸುವರ್ಣ ಸೇರಿದಂತೆ ಸ್ಥಳೀಯ ಗಣ್ಯರು ಪಾತ್ರ ನಿರ್ವಹಿಸಲಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.