ರಾಷ್ಟ್ರೀಕೃತ ಬ್ಯಾಂಕ್‌ಗೆ ಮುತ್ತಿಗೆ
ಬಂಟ್ವಾಳ: ಸಾಲ ನೀಡಲು ಆದಾಯ ಮಿತಿಯನ್ನು ಪರಿಗಣಿಸುತ್ತಿಲ್ಲ, ಬಡವರ್ಗದವರಿಗೆ ಸಾಲ ನೀಡುತ್ತಿಲ್ಲ ಎಂದು ಆರೋಪಿಸಿ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ವಿಟ್ಲದ ರಾಷ್ಟ್ರೀಕೃತ ಬ್ಯಾಂಕ್ ಒಂದರ ಶಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು ಮಾತನಾಡಿ, ಈ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಗೃಹ ನಿರ್ಮಾಣ ಸಾಲ, ಮತ್ತು ಇನ್ನಿತರ ಸಾಲಗಳನ್ನು ಕೇಳಿದ್ದಲ್ಲಿ ಆದಾಯ ಮಿತಿ ಪರಿಗಣಿಸಿ ನೀಡದೇ ಬಡವರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬಡವರ ಕಾಳಜಿ ಬಗ್ಗೆ ಹೇಳಿಕೆ ಕೊಡುವ ಸರ್ಕಾರ, ಜನಪ್ರತಿನಿಧಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಈ ಬಗ್ಗೆ ಧ್ವನಿ ಎತ್ತದೆ ಬಡವರನ್ನು ಬಡವರಾಗಿ ಉಳಿಸುವ ತಂತ್ರ ನಡೆಯುತ್ತಿದೆ ಎಂದು ದೂರಿದರು.
ಪ್ರತಿಭಟನಾ ಕಾವು ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬ್ಯಾಂಕಿನ ಮಂಗಳೂರು ಪ್ರಾದೇಶಿಕ ವ್ಯವಸ್ಥಾಪಕ ಶರಣ್ ಚಂದ್ರ ಶೆಟ್ಟಿ ಅವರು ಪ್ರತಿಭಟನಾ ಕಾರರ ಜತೆ ಮಾತನಾಡಿ ಗೃಹ ಸಾಲ ನೀಡಲು ನಿಯಾಮವಳಿ ಪ್ರಕಾರ ಸಾಧ್ಯವಿಲ್ಲ. ಬೇರೆ ಯಾವುದೇ ರೂಪದಲ್ಲಿ ಸಾಲ ನೀಡುವುದಾಗಿ ಭರವಸೆ ನೀಡಿದರು. ವಿಟ್ಲ ಪೊಲೀಸರು ಬಿಗಿ ಬಂದೋ ಬಸ್ತ್ ಏರ್ಪಡಿಸಿದ್ದರು.
ದಲಿತ್ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ, ನಲಿಕೆ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಕೇಶವ ಕಬಕ, ಸಿಪಿಎಂ ಮುಖಂಡ ರಾಮಣ್ಣ ವಿಟ್ಲ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

